1 ಪೂರ್ವಕಾಲ ವೃತ್ತಾಂತ 21:22 - ಪರಿಶುದ್ದ ಬೈಬಲ್22 ದಾವೀದನು ಒರ್ನಾನನಿಗೆ, “ನಿನ್ನ ಕಣವನ್ನು ನನಗೆ ಕ್ರಯಕ್ಕೆ ಮಾರಿಬಿಡು. ನಾನು ಇಲ್ಲಿ ಯಜ್ಞವೇದಿಕೆಯನ್ನು ಕಟ್ಟಿ ದೇವರನ್ನು ಆರಾಧಿಸಬೇಕು. ಆಗ ಈ ಭಯಂಕರ ವ್ಯಾಧಿಯು ನಿಂತುಹೋಗುವುದು” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದಾವೀದನು ಅವನಿಗೆ, “ನಿನ್ನ ಕಣವನ್ನೂ ಭೂಮಿಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುತ್ತೇನೆ; ಪೂರ್ಣ ಕ್ರಯ ತೆಗೆದುಕೊಂಡು ಅದನ್ನು ಕೊಡು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದಾವೀದನು ಅವನಿಗೆ - ನಿನ್ನ ಕಣವನ್ನೂ ಭೂವಿುಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟಿಸುತ್ತೇನೆ; ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ದಾವೀದನು ಒರ್ನಾನನಿಗೆ, “ಈ ವ್ಯಾಧಿಯು, ಜನರನ್ನು ಬಿಟ್ಟುಹೋಗುವಂತೆ ನಾನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ, ಈ ಕಣದ ಸ್ಥಳವನ್ನು ನನಗೆ ಕೊಡು. ಅದನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು,” ಎಂದನು. ಅಧ್ಯಾಯವನ್ನು ನೋಡಿ |