Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:27 - ಪರಿಶುದ್ದ ಬೈಬಲ್‌

27 ಆಗ ದೇವರು ತನ್ನ ದೂತನಿಗೆ ಖಡ್ಗವನ್ನು ಒರೆಯಲ್ಲಿ ಹಾಕಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದರು. ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ದೂತನಿಗೆ ಹೇಳಿದ್ದರಿಂದ, ಅವನು ತನ್ನ ಖಡ್ಗವನ್ನು ಒರೆಗೆ ತಿರುಗಿ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:27
12 ತಿಳಿವುಗಳ ಹೋಲಿಕೆ  

ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು! ತಂದೆಯು ನನಗೆ ಕೊಟ್ಟಿರುವ ಸಂಕಟದ ಪಾತ್ರೆಯನ್ನು ನಾನು ಸ್ವೀಕರಿಸಿಕೊಳ್ಳಬೇಕು” ಎಂದು ಹೇಳಿದನು.


ಯೇಸು ಅವನಿಗೆ, “ನಿನ್ನ ಖಡ್ಗವನ್ನು ಒರೆಗೆ ಹಾಕು. ಕತ್ತಿಯನ್ನು ಬಳಸುವ ಜನರು ಕತ್ತಿಯಿಂದಲೇ ಸಾಯುತ್ತಾರೆ.


“‘ಬಾಬಿಲೋನೇ, ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು. ನೀನು ಎಲ್ಲಿ ನಿರ್ಮಿಸಲ್ಪಟ್ಟಿದ್ದೆಯೋ, ಎಲ್ಲಿ ನೀನು ಜನ್ಮತಾಳಿದೆಯೋ ಅಲ್ಲಿ ನಿನ್ನ ನ್ಯಾಯತೀರಿಸುವೆನು.


“ಅಯ್ಯೋ, ಯೆಹೋವನ ಖಡ್ಗವೇ, ನೀನಿನ್ನೂ ಹೋಗಲಿಲ್ಲವೇ? ಎಷ್ಟು ಹೊತ್ತು ನೀನು ಹೋರಾಡುತ್ತಿರುವೆ? ನಿನ್ನ ಒರೆಯಲ್ಲಿ ಹೋಗು! ಸುಮ್ಮನಿರು, ಶಾಂತವಾಗಿರು!


ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.


ಒರ್ನಾನನು ಗೋಧಿಯನ್ನು ತನ್ನ ಕಣದಲ್ಲಿ ಬಡಿಯುತ್ತಾ ತಿರುಗಿನೋಡಿದಾಗ ದೇವದೂತನನ್ನು ಕಂಡನು. ಅವನ ನಾಲ್ಕು ಮಂದಿ ಗಂಡುಮಕ್ಕಳು ಓಡಿಹೋಗಿ ಅವಿತುಕೊಂಡರು.


ದೇವದೂತನು ಜೆರುಸಲೇಮನ್ನು ನಾಶಗೊಳಿಸಲು ಅದರತ್ತ ತನ್ನ ಕೈಯನ್ನು ಚಾಚಿದನು. ಆದರೆ ಸಂಭವಿಸಿದ ಕೆಟ್ಟಕಾರ್ಯಗಳ ಬಗ್ಗೆ ಯೆಹೋವನು ಪಶ್ಚಾತ್ತಾಪಪಟ್ಟನು. ಯೆಹೋವನು ಜನರನ್ನು ನಾಶಗೊಳಿಸಿದ ದೇವದೂತನಿಗೆ, “ಇಲ್ಲಿಗೆ ಸಾಕು! ನಿನ್ನ ಕೈಯನ್ನು ಕೆಳಗಿಳಿಸು” ಎಂದು ಹೇಳಿದನು. ಆಗ ಆ ಯೆಹೋವನ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಅಲ್ಲಿ ದೇವರನ್ನು ಆರಾಧಿಸಲು ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ದಾವೀದನು ಅದರ ಮೇಲೆ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿದನು. ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಪರಲೋಕದಿಂದ ಬೆಂಕಿಯನ್ನು ಕಳುಹಿಸುವುದರ ಮೂಲಕ ದಾವೀದನಿಗೆ ಉತ್ತರಿಸಿದನು. ಸರ್ವಾಂಗಹೋಮಗಳ ಯಜ್ಞವೇದಿಕೆಯ ಮೇಲೆ ಬೆಂಕಿಯು ಇಳಿದುಬಂದಿತು.


ದೇವರು ತನ್ನ ಪ್ರಾರ್ಥನೆಯನ್ನು ಕೇಳಿ ಉತ್ತರ ಕೊಟ್ಟದ್ದನ್ನು ಕಂಡು ದಾವೀದನು ಆತನಿಗೆ ಯಜ್ಞಗಳನ್ನು ಸಮರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು