Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:3 - ಪರಿಶುದ್ದ ಬೈಬಲ್‌

3 ಅದಕ್ಕೆ ಉತ್ತರವಾಗಿ ಯೋವಾಬನು, “ಯೆಹೋವನು ತನ್ನ ಜನಾಂಗವನ್ನು ನೂರುಪಟ್ಟು ಅಭಿವೃದ್ಧಿಪಡಿಸಲಿ. ಅರಸನೇ, ನೀನು ಈ ಕಾರ್ಯವನ್ನು ಯಾಕೆ ಮಾಡಿಸಬೇಕು? ಹೀಗೆ ಮಾಡಿದರೆ ನೀನು ಎಲ್ಲಾ ಇಸ್ರೇಲರನ್ನು ಪಾಪದಲ್ಲಿ ಬೀಳುವಂತೆ ಮಾಡುತ್ತಿರುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಯೋವಾಬನು, “ನನ್ನ ಒಡೆಯರಾದ ಅರಸರೇ, ಸರ್ವೇಶ್ವರ ತಮ್ಮ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ; ಅವರೆಲ್ಲರೂ ನನ್ನ ಒಡೆಯರ ಸೇವಕರಷ್ಟೇ. ಆದರೆ ಒಡೆಯರು ಇಂಥದನ್ನು ಅಪೇಕ್ಷಿಸಿದ್ದೇಕೆ? ಇಸ್ರಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೋವಾಬನು - ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದನ್ನು ಅಪೇಕ್ಷಿಸುವದೇನು? ಇಸ್ರಾಯೇಲ್ಯರನ್ನು ಅಪರಾಧಕ್ಕೆ ಗುರಿಮಾಡುವದೇಕೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೋವಾಬನು, “ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ. ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರೂ ನನ್ನ ಒಡೆಯನ ಸೇವಕರಲ್ಲವೋ, ನನ್ನ ಒಡೆಯನು ಈ ಕಾರ್ಯವನ್ನು ಅಪೇಕ್ಷಿಸುವುದು ಏಕೆ? ಇದು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:3
15 ತಿಳಿವುಗಳ ಹೋಲಿಕೆ  

ನಮ್ಮ ಪೂರ್ವಿಕರ ದೇವರಾದ ಯೆಹೋವನು ಈಗ ಇರುವುದಕ್ಕಿಂತ ಸಾವಿರಪಟ್ಟು ಅಧಿಕವಾಗಿ ನಿಮ್ಮ ಜನಸಂಖ್ಯೆಯನ್ನು ಹೆಚ್ಚಿಸಲಿ. ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮನ್ನು ಆಶೀರ್ವದಿಸಲಿ.


ನೀವು ನನಗೆ ವಿಧೇಯರಾಗಿದ್ದರೆ, ನಿಮ್ಮ ಸಂತಾನವು ಅಭಿವೃದ್ಧಿಯಾಗುತ್ತಿತ್ತು. ಅವರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿರುತ್ತಿದ್ದರು. ನೀವು ನನಗೆ ವಿಧೇಯರಾಗಿದ್ದರೆ, ನೀವು ನಾಶವಾಗಿರುತ್ತಿರಲಿಲ್ಲ ಮತ್ತು ನನ್ನೆದುರಿನಿಂದ ನಿಮ್ಮ ಹೆಸರು ತೆಗೆದುಹಾಕಲ್ಪಡುತ್ತಿರಲಿಲ್ಲ.”


ನೀನು ಪ್ರೀತಿಸುವ ಜನಾಂಗಕ್ಕೆ ನೀನು ಸಹಾಯ ಮಾಡಿದೆ. ಬೇರೆ ಜನಾಂಗದವರು ಅವರನ್ನು ಸೋಲಿಸದಂತೆ ಮಾಡಿದೆ.


ಅಧಿಕ ಜನಸಂಖ್ಯೆಯು ರಾಜನಿಗೆ ಗೌರವ. ಪ್ರಜೆಗಳೇ ಇಲ್ಲದಿದ್ದರೆ ರಾಜನಿಗೆ ಬೆಲೆಯೇ ಇಲ್ಲ.


ಯೆಹೋವನು ನಿಮ್ಮ ಕುಟುಂಬಗಳನ್ನೂ ನಿಮ್ಮ ಮಕ್ಕಳ ಕುಟುಂಬಗಳನ್ನೂ ಅಭಿವೃದ್ಧಿಪಡಿಸಲಿ.


ನಾವು ಧೈರ್ಯಶಾಲಿಗಳಾಗಿದ್ದು ಅಂಜದೆ ನಮ್ಮ ಜನರಿಗಾಗಿಯೂ ನಮ್ಮ ದೇವರ ಪಟ್ಟಣಗಳಿಗಾಗಿಯೂ ಯುದ್ಧಮಾಡೋಣ. ಯೆಹೋವನು ತನ್ನ ಚಿತ್ತದಂತೆ ನಮ್ಮನ್ನು ನಡೆಸಲಿ” ಎಂದು ಹೇಳಿದನು.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ಮಕ್ಕಳೇ, ಇಂತಹ ದುಷ್ಕೃತ್ಯಗಳನ್ನು ಮಾಡಬೇಡಿ. ಯೆಹೋವನ ಜನರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಮಾತಾಡುತ್ತಿದ್ದಾರೆ.


ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು.


ಆಮೇಲೆ ಅಬೀಮೆಲೆಕನು ಅಬ್ರಹಾಮನನ್ನು ಕರೆಸಿ, “ನೀನು ನನಗೆ ಹೀಗೇಕೆ ಮಾಡಿದೆ? ನಿನಗೆ ವಿರೋಧವಾಗಿ ನಾನೇನು ಮಾಡಿದೆ? ಆಕೆ ತಂಗಿಯಾಗಬೇಕೆಂದು ನೀನೇಕೆ ಸುಳ್ಳು ಹೇಳಿದೆ? ನೀನು ನನ್ನ ರಾಜ್ಯಕ್ಕೆ ಕೇಡನ್ನು ಬರಮಾಡಿರುವೆ. ನೀನು ಹೀಗೆ ಮಾಡಬಾರದಿತ್ತು.


ಆದರೆ ಅರಸನಾದ ದಾವೀದನು ತನ್ನ ನಿರ್ಧಾರವನ್ನು ಬದಲಿಸಲಿಲ್ಲ. ದಾವೀದನು ಹೇಳಿದಂತೆಯೇ ಯೋವಾಬನು ಮಾಡಬೇಕಾಯಿತು. ಯೋವಾಬನು ದೇಶದ ಎಲ್ಲಾ ಕಡೆಗಳಿಗೆ ಹೋಗಿ ಜನರನ್ನು ಲೆಕ್ಕಿಸಿ ಜೆರುಸಲೇಮಿಗೆ ಬಂದನು.


“ಇಸ್ರೇಲರನ್ನು ಲೆಕ್ಕಿಸು. ಹೀಗಾಗಿ ಎಷ್ಟು ಮಂದಿ ಜನರಿರುತ್ತಾರೆಂದು ನೀನು ತಿಳಿದುಕೊಳ್ಳುವೆ. ಪ್ರತಿಸಾರಿ ಇದನ್ನು ಮಾಡಿದಾಗ, ಪ್ರತಿಯೊಬ್ಬನು ತನಗೋಸ್ಕರವಾಗಿ ಯೆಹೋವನಿಗೆ ತೆರಿಗೆಯನ್ನು ಕೊಡಬೇಕು. ಆಗ ಜನರಿಗೆ ಯಾವ ಕೇಡುಗಳೂ ಉಂಟಾಗುವುದಿಲ್ಲ.


ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:


ಆದ್ದರಿಂದ ರಾಜನಾದ ಯೆಹೋವಾಷನು ಯಾಜಕನಾದ ಯೆಹೋಯಾದಾವ ಮತ್ತು ಇತರ ಯಾಜಕರನ್ನು ಕರೆಸಿ, “ನೀವು ಆಲಯವನ್ನು ಸರಿಪಡಿಸಲಿಲ್ಲವೇಕೆ? ನಿಮ್ಮಿಂದ ಸೇವೆ ಹೊಂದುವ ಜನರು ಕೊಡುವ ಹಣವನ್ನು ಉಪಯೋಗಿಸಬೇಡಿ. ಆಲಯವನ್ನು ಸರಿಪಡಿಸುವುದಕ್ಕಾಗಿ ಆ ಹಣವನ್ನು ಉಪಯೋಗಿಸಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು