1 ಪೂರ್ವಕಾಲ ವೃತ್ತಾಂತ 21:30 - ಪರಿಶುದ್ದ ಬೈಬಲ್30 ದಾವೀದನು ದೇವರ ಸಂಗಡ ಮಾತನಾಡಲು ಭಯಪಟ್ಟದ್ದರಿಂದ ದೇವದರ್ಶನ ಗುಡಾರಕ್ಕೆ ಹೋಗಲಿಲ್ಲ. ಅವನು ಖಡ್ಗಧಾರಿಯಾಗಿದ್ದ ದೇವದೂತನಿಗೂ ಭಯಪಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆ ಕಾಲದಲ್ಲಿ ದಾವೀದನಿಗೆ ಸರ್ವೇಶ್ವರನಿಂದ ಸದುತ್ತರ ದೊರಕಿದ್ದರಿಂದ ಅವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರದೊರಕಿದ್ದರಿಂದ ಅವನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ದಾವೀದನು ದೇವರ ಹತ್ತಿರ ವಿಚಾರಿಸಲು, ಅದರ ಬಳಿಗೆ ಹೋಗಲಾರದೆ ಇದ್ದನು. ಏಕೆಂದರೆ ಅವನು ಯೆಹೋವ ದೇವರ ದೂತನ ಖಡ್ಗದ ನಿಮಿತ್ತ ಹೆದರಿದ್ದನು. ಅಧ್ಯಾಯವನ್ನು ನೋಡಿ |
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.