1 ಪೂರ್ವಕಾಲ ವೃತ್ತಾಂತ 21:5 - ಪರಿಶುದ್ದ ಬೈಬಲ್5 ಅರಸನಿಗೆ ಜನಗಣತಿಯ ಲೆಕ್ಕ ಒಪ್ಪಿಸಿದನು. ಇಸ್ರೇಲಿನಲ್ಲಿ ಒಟ್ಟು ಹನ್ನೊಂದು ಲಕ್ಷ ಮಂದಿ ಖಡ್ಗ ಉಪಯೋಗಿಸುವವರು ಇದ್ದರು. ಯೆಹೂದದಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಖಡ್ಗ ಉಪಯೋಗಿಸುವವರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳು ಇವು: ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೋವಾಬನು ದಾವೀದನಿಗೆ ಒಪ್ಪಿಸಿದ ಖಾನೇಷುಮಾರಿಯ ಸಂಖ್ಯೆಯು - ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೋವಾಬನು ದಾವೀದನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಸಮಸ್ತ ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಹನ್ನೊಂದು ಲಕ್ಷಮಂದಿ ಇದ್ದರು. ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಇದ್ದರು. ಅಧ್ಯಾಯವನ್ನು ನೋಡಿ |