Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:10 - ಪರಿಶುದ್ದ ಬೈಬಲ್‌

10 ಅವನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟುವನು. ಅವನು ನನ್ನ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು. ನಾನು ಅವನ ರಾಜ್ಯವನ್ನು ಬಲಗೊಳಿಸುವೆನು; ಅವನ ಸಂತಾನದವರು ಇಸ್ರೇಲ್ ರಾಜ್ಯವನ್ನು ನಿರಂತರಕ್ಕೂ ಆಳುವರು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನೇ ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು; ಇಸ್ರಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು,” ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು, ನಾನು ಅವನಿಗೆ ತಂದೆಯಾಗಿರುವೆನು; ಇಸ್ರಾಯೇಲ್ಯರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ನನ್ನ ನಾಮಕ್ಕೆ ಆಲಯವನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:10
16 ತಿಳಿವುಗಳ ಹೋಲಿಕೆ  

ದೇವರು ಯಾವ ದೂತರಿಗೂ ಈ ಸಂಗತಿಗಳನ್ನು ಎಂದೂ ಹೇಳಿಲ್ಲ: “ನೀನು ನನ್ನ ಮಗ; ಈ ದಿನ ನಾನು ನಿನ್ನ ತಂದೆಯಾದೆನು.” ದೇವರು ದೂತನೊಬ್ಬನಿಗೆ ಎಂದೂ ಹೀಗೆ ಹೇಳಿಲ್ಲ: “ನಾನು ಅವನ ತಂದೆಯಾಗಿರುವೆನು, ಅವನು ನನ್ನ ಮಗನಾಗಿರುವನು.”


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು.


“ನನ್ನ ತಂದೆಯಾದ ದಾವೀದನಿಗೆ ಯೆಹೋವನು, ‘ನಿನ್ನ ನಂತರ ನಿನ್ನ ಮಗನನ್ನು ನಾನು ರಾಜನನ್ನಾಗಿ ಮಾಡುತ್ತೇನೆ. ನನ್ನನ್ನು ಸನ್ಮಾನಿಸಲು ನಿನ್ನ ಮಗನು ನನಗೆ ಒಂದು ದೇವಾಲಯವನ್ನು ಕಟ್ಟುತ್ತಾನೆ’ ಎಂದು ವಾಗ್ದಾನ ಮಾಡಿದ್ದನು. ಈಗ, ನನ್ನ ದೇವರಾದ ಯೆಹೋವನ ಗೌರವಾರ್ಥವಾಗಿ ದೇವಾಲಯವನ್ನು ನಿರ್ಮಿಸಬೇಕೆಂದಿದ್ದೇನೆ.


ಅದೋನೀಯನು, “ಒಂದು ಕಾಲದಲ್ಲಿ ರಾಜ್ಯಾಧಿಕಾರವು ನನ್ನದಾಗಿತ್ತೆಂಬುದು ನಿನ್ನ ನೆನಪಿನಲ್ಲಿದೆ. ಇಸ್ರೇಲಿನ ಜನರೆಲ್ಲರೂ ನಾನೇ ಅವರ ರಾಜನೆಂದು ತಿಳಿದಿದ್ದರು. ಆದರೆ ಸಂಗತಿಗಳು ಬದಲಾದವು. ಈಗ ನನ್ನ ಸೋದರನೇ ರಾಜನು. ಯೆಹೋವನು ಅವನನ್ನು ರಾಜನನ್ನಾಗಿ ಆರಿಸಿದನು.


ಯೆಹೋವನು ನನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದನು. ನನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಆತನು ನನಗೆ ದಯಪಾಲಿಸಿದನು. ಯೆಹೋವನು ತನ್ನ ವಾಗ್ದಾನದಂತೆ, ನನಗೆ ಮತ್ತು ನನ್ನ ವಂಶಿಕರಿಗೆ ರಾಜ್ಯಾಧಿಕಾರವನ್ನು ನೀಡಿದನು. ಅದೋನೀಯನು ಈ ದಿನವೇ ಸಾಯಬೇಕು ಎಂದು ನಾನು ಈ ಎಲ್ಲಾ ಕಾರ್ಯಗಳನ್ನು ನೆರವೇರಿಸಿದ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ನಂತರ ರಾಜನಾದ ಸೊಲೊಮೋನನು ಯೆಹೋವನಿಗೆ ದೀರ್ಘ ಪ್ರಾರ್ಥನೆಯನ್ನು ಮಾಡಿದನು. ಅವನ ಪ್ರಾರ್ಥನೆ ಇಂತಿದೆ: “ಇಸ್ರೇಲಿನ ದೇವರಾದ ಯೆಹೋವನು ಮಹತ್ವ ಪೂರ್ಣನಾಗಿದ್ದಾನೆ. ಯೆಹೋವನು ನನ್ನ ತಂದೆಯಾದ ದಾವೀದನಿಗೆ ತಾನು ಮಾಡಿದ್ದ ವಾಗ್ದಾನಗಳನ್ನು ಸ್ವತಃ ತಾನೇ ನೆರವೇರಿಸಿದ್ದಾನೆ. ಯೆಹೋವನು ನನ್ನ ತಂದೆಗೆ,


ನೀನು ಅವುಗಳನ್ನೆಲ್ಲಾ ಕೈಕೊಂಡು ನಡೆದರೆ ಯಾವಾಗಲೂ ನಿನ್ನ ಕುಟುಂಬದ ಯಾವನಾದರೊಬ್ಬನು ಇಸ್ರೇಲಿನ ರಾಜನಾಗಿರುತ್ತಾನೆಂದು ನಾನು ನಿನಗೆ ವಾಗ್ದಾನ ಮಾಡುತ್ತೇನೆ. ನಿನ್ನ ತಂದೆಯಾದ ದಾವೀದನಿಗೆ ನಾನು ಈ ವಾಗ್ದಾನವನ್ನು ಮಾಡಿದ್ದೆನು. ಯಾವಾಗಲೂ ಅವನ ಸಂತತಿಯವರಲ್ಲಿ ಯಾವನಾದರೊಬ್ಬನು ಇಸ್ರೇಲನ್ನು ಆಳುತ್ತಾನೆಂದು ನಾನು ಅವನಿಗೆ ಹೇಳಿದ್ದೆನು.


ಯೆಹೋವನು ನನಗೆ ಅನೇಕ ಮಕ್ಕಳನ್ನು ಕೊಟ್ಟನು. ಆ ಮಕ್ಕಳಲ್ಲಿ ಯೆಹೋವನು ಸೊಲೊಮೋನನನ್ನು ನನ್ನ ನಂತರ ಇಸ್ರೇಲರ ಅರಸನನ್ನಾಗಿ ಆರಿಸಿಕೊಂಡಿದ್ದಾನೆ. ಆದರೆ ನಿಜವಾಗಿಯೂ, ಇಸ್ರೇಲ್, ದೇವರಾದ ಯೆಹೋವನ ರಾಜ್ಯವಾಗಿದೆ.


ನಿನ್ನ ಸೇವಕನಾದ ದಾವೀದನಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸಿರುವೆ. ದಾವೀದನು ನನ್ನ ತಂದೆ. ಅವನಿಗೆ ನೀನು ವಾಗ್ದಾನವನ್ನು ಮಾಡಿರುವೆ. ಈ ದಿನ ನಿನ್ನ ವಾಗ್ದಾನವು ನಿನ್ನ ಹಸ್ತದ ಮೂಲಕ ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು