1 ಪೂರ್ವಕಾಲ ವೃತ್ತಾಂತ 22:14 - ಪರಿಶುದ್ದ ಬೈಬಲ್14 “ಸೊಲೊಮೋನನೇ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಮೂರು ಸಾವಿರದ ಏಳುನೂರೈವತ್ತು ಟನ್ ಬಂಗಾರ, ಮೂವತ್ತೇಳು ಸಾವಿರದ ಐನೂರು ಟನ್ ಬೆಳ್ಳಿ ಮತ್ತು ತೂಕ ಮಾಡಲಾಗದಷ್ಟು ತಾಮ್ರ ಮತ್ತು ಕಬ್ಬಿಣವನ್ನು ಕೂಡಿಸಿಟ್ಟಿದ್ದೇನೆ. ಅಲ್ಲದೆ ಮರಗಳನ್ನು ಮತ್ತು ಕಲ್ಲುಗಳನ್ನು ಕೊಟ್ಟಿರುತ್ತೇನೆ. ಸೊಲೊಮೋನನೇ, ನೀನು ಇವುಗಳಿಗೆ ಇನ್ನೂ ಕೂಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ ಲೆಕ್ಕವಿಲ್ಲದಷ್ಟು ತಾಮ್ರ ಕಬ್ಬಿಣ ಇವುಗಳನ್ನೂ ಕಲ್ಲುಮರಗಳನ್ನೂ ಕೂಡಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಇಗೋ, ಕಷ್ಟಪಟ್ಟು ನಾನು ಯೆಹೋವ ದೇವರ ಆಲಯಕ್ಕೋಸ್ಕರ ಮೂರು ಸಾವಿರದ ನಾನೂರ ಎಪ್ಪತ್ತು ಮೆಟ್ರಿಕ್ ಟನ್ ಬಂಗಾರವನ್ನೂ, ಮೂವತ್ತ ನಾಲ್ಕು ಸಾವಿರದ ಐನೂರು ಮೆಟ್ರಿಕ್ ಟನ್ ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ, ಕಬ್ಬಿಣವನ್ನೂ ಮರಗಳನ್ನೂ, ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಸೇರಿಸಬಹುದು. ಅಧ್ಯಾಯವನ್ನು ನೋಡಿ |
ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ.