Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:18 - ಪರಿಶುದ್ದ ಬೈಬಲ್‌

18 ಬಳಿಕ ತನ್ನ ಮಾತನ್ನು ಮುಂದುವರಿಸಿ, “ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ನಿಮಗೆ ಸಮಾಧಾನವನ್ನು ಅನುಗ್ರಹಿಸಿರುತ್ತಾನೆ. ನಮ್ಮ ಸುತ್ತಮುತ್ತಲಿನ ಶತ್ರುಗಳನ್ನು ಸೋಲಿಸಲು ಆತನು ನಮಗೆ ಸಹಾಯಮಾಡಿದ್ದಾನೆ. ಈಗ ಯೆಹೋವನೂ ಆತನ ಜನರೂ ಈ ದೇಶವನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು ಅವರಿಗೆ, “ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲೂ ನಿಮಗೆ ನೆಮ್ಮದಿಯನ್ನು ಅನುಗ್ರಹಿಸಿದ್ದಾರೆ. ನಾಡಿನ ಮೂಲ ನಿವಾಸಿಗಳನ್ನು ನನ್ನ ಕೈಗೊಪ್ಪಿಸಿದ್ದಾರೆ. ನೀವೆ ನೋಡುವ ಹಾಗೆ ನಾಡು ಸರ್ವೇಶ್ವರನಿಗೂ ಅವರ ಪ್ರಜೆಗಳಿಗೂ ಸ್ವಾಧೀನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ, ಅಲ್ಲವೇ? ಎಲ್ಲಾ ಕಡೆಗಳಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾರೆ, ಅಲ್ಲವೇ? ನಿಶ್ಚಯವಾಗಿ ಅವರು ದೇಶ ನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ, ದೇಶವು ಯೆಹೋವ ದೇವರ ಮುಂದೆಯೂ, ಅವರ ಜನರ ಮುಂದೆಯೂ ಸ್ವಾಧೀನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:18
14 ತಿಳಿವುಗಳ ಹೋಲಿಕೆ  

ದಾವೀದನು, “ಇಸ್ರೇಲರ ದೇವರಾದ ಯೆಹೋವನು ತನ್ನ ಜನರಿಗೆ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ದೇವರು ನಿರಂತರವೂ ಜೆರುಸಲೇಮಿನಲ್ಲಿ ವಾಸಿಸಲು ಬಂದಿರುತ್ತಾನೆ.


ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.


ದಾವೀದನು ತನ್ನ ಅರಮನೆಯಲ್ಲಿ ಸುಖವಾಗಿ ವಾಸಿಸುವಂತೆಯೂ ಅವನ ಸುತ್ತಲಿನ ಶತ್ರುಗಳಿಂದ ಭಯವಿಲ್ಲದಂತೆಯೂ ಯೆಹೋವನು ಮಾಡಿದನು.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!


ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.


ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದ್ದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗುವನು. ವೈರಿಗಳೊಂದಿಗೆ ಯುದ್ಧಮಾಡಲು ಆತನು ನಿಮಗೆ ಸಹಾಯ ಮಾಡುವನು ಮತ್ತು ನಿಮಗೆ ಜಯವನ್ನು ಕೊಡುವನು.’


ಯೆಹೋಶುವನು ಆ ಎಲ್ಲ ಪಟ್ಟಣಗಳನ್ನು ಮತ್ತು ಅವುಗಳ ಅರಸರನ್ನು ಒಂದೇ ದಂಡೆಯಾತ್ರೆಯಲ್ಲಿ ಸ್ವಾಧೀನಪಡಿಸಿಕೊಂಡನು. ಇಸ್ರೇಲಿನ ದೇವರಾದ ಯೆಹೋವನು ಇಸ್ರೇಲಿನವರಿಗಾಗಿ ಯುದ್ಧ ಮಾಡುತ್ತಿದ್ದುದರಿಂದ ಯೆಹೋಶುವನಿಗೆ ಇದು ಸಾಧ್ಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು