1 ಪೂರ್ವಕಾಲ ವೃತ್ತಾಂತ 22:19 - ಪರಿಶುದ್ದ ಬೈಬಲ್19 ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಾಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದದರಿಂದ ನೀವು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ನಿಬಂಧನ ಮಂಜೂಷವನ್ನೂ ದೇವಾರಾಧನಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.