ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.