Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:5 - ಪರಿಶುದ್ದ ಬೈಬಲ್‌

5 ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯ ಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದುಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಾವೀದನು ತನ್ನಲ್ಲೇ, “ನನ್ನ ಮಗ ಸೊಲೊಮೋನನು ಎಳೇ ಪ್ರಾಯದವನು. ಸರ್ವೇಶ್ವರನಿಗೆ ಕಟ್ಟಿಸತಕ್ಕ ದೇವಾಲಯವು, ಜಗತ್ತಿನಲ್ಲೆಲ್ಲಾ ಸುಪ್ರಸಿದ್ಧವಾಗಿರಬೇಕು; ಅದು ಅತಿ ಅದ್ಭುತಕರವಾಗಿರಬೇಕು; ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು,” ಎಂದುಕೊಂಡನು. ಸಾಯುವುದಕ್ಕೆ ಮೊದಲೇ ಹಲವಾರು ಸಲಕರಣೆಗಳನ್ನು ದೊಡ್ಡ ಸಂಖ್ಯೆಯಲ್ಲಿ ಸಜ್ಜು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಾವೀದನು [ತನ್ನ ಮನಸ್ಸಿನಲ್ಲಿ] - ನನ್ನ ಮಗನಾದ ಸೊಲೊಮೋನನು ಎಳೇ ಪ್ರಾಯದವನಾಗಿದ್ದಾನೆ; ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯವು ಎಲ್ಲಾ ದೇಶಗಳಲ್ಲಿ ಕೀರ್ತಿ ಘನಗಳನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾದದ್ದಾಗಿರಬೇಕು; ಆದದರಿಂದ ಅದಕ್ಕೆ ಬೇಕಾಗುವದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವದಕ್ಕೆ ಮೊದಲೇ ಬಹಳವಾಗಿ ಸೌರಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಾವೀದನು, “ನನ್ನ ಮಗ ಸೊಲೊಮೋನನು ಎಳೆಯ ಪ್ರಾಯದವನಾಗಿದ್ದಾನೆ. ಯೆಹೋವ ದೇವರಿಗೆ ಕಟ್ಟಬೇಕಾದ ಆಲಯವು ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ, ಸೌಂದರ್ಯದಲ್ಲಿಯೂ ಅಧಿಕ ಘನವುಳ್ಳದ್ದಾಗಿರಬೇಕು. ನಾನು ಅದಕ್ಕೋಸ್ಕರ ಈಗ ಸಿದ್ಧಮಾಡುವೆನು,” ಎಂದು ಹೇಳಿದನು. ಆದ್ದರಿಂದ ದಾವೀದನು ಸಾಯುವುದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:5
22 ತಿಳಿವುಗಳ ಹೋಲಿಕೆ  

ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ.


ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.


ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.


ಆತನು (ಯೇಸು) ವೃದ್ಧಿಯಾಗಬೇಕು ಮತ್ತು ನಾನು ಕಡಿಮೆಯಾಗಬೇಕು.


ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು.


ಶಿಷ್ಯರಲ್ಲಿ ಕೆಲವರು ದೇವಾಲಯದ ಕುರಿತು ಮಾತಾಡುತ್ತಾ, “ಇದು ಅಂದವಾದ ಕಲ್ಲುಗಳಿಂದಲೂ ಹರಕೆಯ ಕೊಡುಗೆಗಳಿಂದಲೂ ಎಷ್ಟೊಂದು ಸುಂದರವಾಗಿದೆ!” ಎಂದರು.


‘ಈ ಅಂತಿಮ ದೇವಾಲಯವು ಮೊದಲನೆ ಆಲಯಕ್ಕಿಂತಲೂ ಸುಂದರವಾಗಿಯೂ ವೈಭವವಾಗಿಯೂ ಇರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು!’ ಜ್ಞಾಪಕದಲ್ಲಿಡಿ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!”


‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?


“ಆ ಜನರು ತಮ್ಮ ಬೆಳ್ಳಿಬಂಗಾರಗಳ ಆಭರಣಗಳನ್ನು ಅಲಂಕಾರದ ವಸ್ತುಗಳನ್ನಾಗಿ ಪರಿವರ್ತಿಸಿದರು. ಅವುಗಳಿಂದ ತಮ್ಮ ಕೊಳಕಾದ ಮತ್ತು ಅಸಹ್ಯಕರವಾದ ವಿಗ್ರಹಗಳನ್ನು ಮಾಡಿಕೊಂಡರು. ಆದ್ದರಿಂದ ಅವರ ಬೆಳ್ಳಿಬಂಗಾರಗಳನ್ನು ಅವರಿಗೆ ಕೊಳೆಯ ಬಟ್ಟೆಯನ್ನಾಗಿ ಮಾಡುವೆನು.


ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ಆದರೆ ಮೊದಲಿನ ದೇವಾಲಯವನ್ನೂ ಅದರ ವೈಭವವನ್ನೂ ನೋಡಿದ್ದ ಕುಲಪ್ರಧಾನರು, ಯಾಜಕರು ಮತ್ತು ಲೇವಿಯರು ಗಟ್ಟಿಯಾಗಿ ಅತ್ತರು. ಇತರರು ಗಟ್ಟಿಯಾಗಿ ಹರ್ಷಧ್ವನಿ ಮಾಡಿದರು.


ಆಗ ಕೆಲಸಕ್ಕೆ ಬಾರದ ದುಷ್ಟಜನರು ಯಾರೊಬ್ಬಾಮನ ಸ್ನೇಹಿತರಾಗಿ ಅವನನ್ನು ಹಿಂಬಾಲಿಸಿ ರೆಹಬ್ಬಾಮನಿಗೆ ವಿರುದ್ಧವಾಗಿ ದಂಗೆ ಎದ್ದರು. ಸೊಲೊಮೋನನ ಮಗನಾದ ರೆಹಬ್ಬಾಮನು ಆಗ ಸಣ್ಣ ಪ್ರಾಯದವನಾಗಿ ಅನುಭವವಿಲ್ಲದವನಾಗಿದ್ದನು. ಆದ್ದರಿಂದ ಯಾರೊಬ್ಬಾಮನನ್ನೂ ಅವನ ದುಷ್ಟ ಹಿಂಬಾಲಕರನ್ನೂ ತಡೆಯಲು ಅವನಿಗೆ ಆಗಲಿಲ್ಲ.


ಅತ್ಯಂತ ಪ್ರಸಿದ್ಧಿಹೊಂದಿದ ಈ ದೇವಾಲಯವನ್ನು ನೋಡುವ ಪ್ರತಿಯೊಬ್ಬನು, ‘ದೇವರು ಈ ದೇಶಕ್ಕೆ ಮತ್ತು ಈ ಆಲಯಕ್ಕೆ ಹೀಗೇಕೆ ಮಾಡಿದನು?’ ಎಂದು ಅಚ್ಚರಿಪಡುವಂತೆ ಮಾಡುವೆನು.


“ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನು. ಆದ್ದರಿಂದ ಆತನಿಗಾಗಿ ನಾನು ಮಹತ್ತಾದ ಆಲಯವನ್ನು ಕಟ್ಟುವೆನು.


ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.


ನಾನು ನನ್ನ ತಂದೆಗೆ ಚಿಕ್ಕ ಮಗನಾಗಿದ್ದೆ. ನನ್ನ ತಾಯಿಗೆ ನಾನೊಬ್ಬನೇ ಮಗನು.


ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.


ಅಲ್ಲದೆ ನನಗೆ ಲೆಬನೋನಿನಿಂದ ದೇವದಾರು, ತುರಾಯಿ ಮತ್ತು ಸುಗಂಧಮರಗಳನ್ನು ಕಳುಹಿಸಿಕೊಡು. ನಿನ್ನ ಸೇವಕರು ಲೆಬನೋನಿನ ಮರಗಳನ್ನು ಕತ್ತರಿಸುವುದರಲ್ಲಿ ನಿಪುಣರೆಂಬುದು ನನಗೆ ಗೊತ್ತಿದೆ. ನಿನ್ನ ಅನುಭವಸ್ಥ ಸೇವಕರಿಗೆ ಸಹಾಯ ಮಾಡಲು ನನ್ನ ಸೇವಕರೂ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು