1 ಪೂರ್ವಕಾಲ ವೃತ್ತಾಂತ 22:7 - ಪರಿಶುದ್ದ ಬೈಬಲ್7 ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬೇಕೆಂಬುದು ನನ್ನ ಹೃದಯದಲ್ಲಿ ಇತ್ತು. ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.
ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.