Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:9 - ಪರಿಶುದ್ದ ಬೈಬಲ್‌

9 ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನಗೆ ಒಬ್ಬ ಮಗನು ಹುಟ್ಟುವನು; ಅವನು ಸಮಾಧಾನಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಣಗಿಸಿ ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವದು. ಅವನ ಕಾಲದಲ್ಲಿ ಇಸ್ರಾಯೇಲ್ಯರಿಗೆ ಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಶಾಂತಿ ಸಮಾಧಾನದ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು. ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ವಿಶ್ರಾಂತಿಯನ್ನು ಕೊಡುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಶಾಂತಿ ಸಮಾಧಾನವನ್ನೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:9
24 ತಿಳಿವುಗಳ ಹೋಲಿಕೆ  

ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್‌ನಿಂದ ಬೇರ್ಷೆಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನದಿಂದ ಕುಳಿತಿರುತ್ತಿದ್ದರು.


ಆದರೆ ಈಗ ನನ್ನ ದೇವರಾದ ಯೆಹೋವನು ನನ್ನ ದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದ್ದಾನೆ. ಈಗ ನನಗೆ ಶತ್ರುಗಳೇ ಇಲ್ಲ. ನನ್ನ ಜನರಿಗೆ ಯಾವ ಅಪಾಯವೂ ಇಲ್ಲ.


ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.


‘ಈ ಅಂತಿಮ ದೇವಾಲಯವು ಮೊದಲನೆ ಆಲಯಕ್ಕಿಂತಲೂ ಸುಂದರವಾಗಿಯೂ ವೈಭವವಾಗಿಯೂ ಇರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು!’ ಜ್ಞಾಪಕದಲ್ಲಿಡಿ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!”


ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.


ನಾನು ಅವರಿಗೆ ‘ಸಮಾಧಾನ’ ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು.” ಇದು ಯೆಹೋವನ ನುಡಿ.


ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.


ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ. ಆದ್ದರಿಂದ ನಮಗೆ ಶಾಂತಿಯನ್ನು ಅನುಗ್ರಹಿಸು.


ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ.


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ನೀನು ಸತ್ತು ನಿನ್ನ ಪೂರ್ವಿಕರ ಬಳಿ ಸೇರಿದಾಗ ನಾನು ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಮಾಡುವೆನು. ನಾನು ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.


ರಾಜನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ರಾಜನೇ, ನನ್ನ ಮಗನಾದ ಸೊಲೊಮೋನನು ನಿನ್ನ ನಂತರದ ರಾಜನೆಂದು ನೀನು ನನಗೆ ವಾಗ್ದಾನ ಮಾಡಿದ್ದೆ. ಹೀಗಿರುವಾಗ ಅದೋನೀಯನು ನೂತನ ರಾಜನಾದದ್ದು ಏಕೆ?’ ಎಂದು ಹೇಳು.


ಅದೋನೀಯನು, “ಒಂದು ಕಾಲದಲ್ಲಿ ರಾಜ್ಯಾಧಿಕಾರವು ನನ್ನದಾಗಿತ್ತೆಂಬುದು ನಿನ್ನ ನೆನಪಿನಲ್ಲಿದೆ. ಇಸ್ರೇಲಿನ ಜನರೆಲ್ಲರೂ ನಾನೇ ಅವರ ರಾಜನೆಂದು ತಿಳಿದಿದ್ದರು. ಆದರೆ ಸಂಗತಿಗಳು ಬದಲಾದವು. ಈಗ ನನ್ನ ಸೋದರನೇ ರಾಜನು. ಯೆಹೋವನು ಅವನನ್ನು ರಾಜನನ್ನಾಗಿ ಆರಿಸಿದನು.


ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.


ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ಈ ದೇಶವು ತಿಫ್ಸಹುದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.


ಬಳಿಕ ತನ್ನ ಮಾತನ್ನು ಮುಂದುವರಿಸಿ, “ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ನಿಮಗೆ ಸಮಾಧಾನವನ್ನು ಅನುಗ್ರಹಿಸಿರುತ್ತಾನೆ. ನಮ್ಮ ಸುತ್ತಮುತ್ತಲಿನ ಶತ್ರುಗಳನ್ನು ಸೋಲಿಸಲು ಆತನು ನಮಗೆ ಸಹಾಯಮಾಡಿದ್ದಾನೆ. ಈಗ ಯೆಹೋವನೂ ಆತನ ಜನರೂ ಈ ದೇಶವನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದಾರೆ.


ನಿನ್ನ ಸೇವಕನಾದ ದಾವೀದನಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸಿರುವೆ. ದಾವೀದನು ನನ್ನ ತಂದೆ. ಅವನಿಗೆ ನೀನು ವಾಗ್ದಾನವನ್ನು ಮಾಡಿರುವೆ. ಈ ದಿನ ನಿನ್ನ ವಾಗ್ದಾನವು ನಿನ್ನ ಹಸ್ತದ ಮೂಲಕ ನೆರವೇರಿತು.


“ಯೆಹೋವನಿಗೆ ಸ್ತೋತ್ರ ಮಾಡಿರಿ! ಆತನು ಇಸ್ರೇಲಿನ ತನ್ನ ಜನರಿಗೆ ವಿಶ್ರಾಂತಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ಆತನು ನಮಗೆ ವಿಶ್ರಾಂತಿಯನ್ನು ದಯಪಾಲಿಸಿರುವನು! ಯೆಹೋವನು ತನ್ನ ಸೇವಕನಾದ ಮೋಶೆಯಿಂದ, ಇಸ್ರೇಲಿನ ಜನರಿಗೆ ಅನೇಕ ಒಳ್ಳೆಯ ವಾಗ್ದಾನಗಳನ್ನು ಮಾಡಿದ್ದಾನೆ. ಯೆಹೋವನು ತನ್ನ ವಾಗ್ದಾನಗಳನ್ನೆಲ್ಲ ಈಡೇರಿಸಿರುವನು.


ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪುನೀಡಲು ರಾಜನಿಗೆ ಕಲಿಸಿಕೊಡು. ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು