1 ಪೂರ್ವಕಾಲ ವೃತ್ತಾಂತ 23:29 - ಪರಿಶುದ್ದ ಬೈಬಲ್29 ಮಾತ್ರವಲ್ಲದೆ ಅವರು ಗೋಧಿಹಿಟ್ಟನ್ನು ಅಳೆದು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ದೇವಾಲಯದೊಳಗಿರುವ ಮೇಜಿನ ಮೇಲೆ ಇಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೈವೇದ್ಯದ ಮೀಸಲ ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವದೂ ಸೇರು ಮೊಳಗೋಲು ಇವುಗಳನ್ನು ಪರೀಕ್ಷಿಸುವದೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೆಹೋವ ದೇವರ ಮಂದಿರದ ಸೇವೆಯ ಕಾರ್ಯದಲ್ಲಿರುವ ಸಮ್ಮುಖದ ರೊಟ್ಟಿಗೋಸ್ಕರವೂ, ಅರ್ಪಣೆ ಬಲಿಯ ನಯವಾದ ಹಿಟ್ಟಿಗೋಸ್ಕರವೂ, ಹುಳಿಯಿಲ್ಲದ ರೊಟ್ಟಿಗಳಿಗೋಸ್ಕರವೂ, ಬಾಂಡ್ಲಿಯಲ್ಲಿ ಮಾಡಿದ್ದಕ್ಕೋಸ್ಕರವೂ, ಕರಿದಿದ್ದಕ್ಕೋಸ್ಕರವೂ, ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳ ಬಳಿಯಲ್ಲಿ ಅವರಿಗೆ ನೇಮಕವಾಗಿತ್ತು. ಅಧ್ಯಾಯವನ್ನು ನೋಡಿ |
ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮರ್ಪಣೆಗೂ ಈ ಹಣವನ್ನು ಉಪಯೋಗಿಸಿರಿ. ಅಮಾವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವ ಕಾರ್ಯಗಳಿಗೆ ಬೇಕಾದರೂ ಈ ಹಣವನ್ನು ಉಪಯೋಗಿಸಿರಿ.
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.
ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.