1 ಪೂರ್ವಕಾಲ ವೃತ್ತಾಂತ 23:31 - ಪರಿಶುದ್ದ ಬೈಬಲ್31 ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಬೇರೆ ವಿಶೇಷ ದಿನಗಳಲ್ಲಿಯೂ ದೇವರಿಗೆ ಸಮರ್ಪಿಸುವ ಸರ್ವಾಂಗಹೋಮವನ್ನು ತಯಾರು ಮಾಡುತ್ತಿದ್ದರು. ಪ್ರತಿದಿನ ಎಷ್ಟು ಮಂದಿ ಲೇವಿಯರು ಸೇವೆಮಾಡಬೇಕೆಂಬುದನ್ನು ಮೊದಲೇ ಗೊತ್ತುಪಡಿಸಲಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನಿಯವಿುತ ಸಂಖ್ಯೆಗೆ ಸರಿಯಾಗಿ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವದೂ ಇವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು. ಅಧ್ಯಾಯವನ್ನು ನೋಡಿ |
ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.