1 ಪೂರ್ವಕಾಲ ವೃತ್ತಾಂತ 24:1 - ಪರಿಶುದ್ದ ಬೈಬಲ್1 ಆರೋನನ ಸಂತಾನದವರು ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಗಂಡುಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆರೋನನ ಸಂತಾನದವರನ್ನು ವರ್ಗಗಳಾಗಿ ವಿಂಗಡಿಸಲಾಗಿತ್ತು. ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ವರು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್ ಈತಾಮಾರ್ ಎಂಬವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆರೋನನ ಪುತ್ರರಲ್ಲಿ ವರ್ಗಗಳಾಗಿ ವಿಭಾಗ ಆದವರು ಇವರೇ. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್. ಅಧ್ಯಾಯವನ್ನು ನೋಡಿ |
ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.
ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.