1 ಪೂರ್ವಕಾಲ ವೃತ್ತಾಂತ 24:2 - ಪರಿಶುದ್ದ ಬೈಬಲ್2 ನಾದಾಬ್ ಮತ್ತು ಅಬೀಹೂ ತಮ್ಮ ತಂದೆ ಸಾಯುವ ಮೊದಲೇ ತೀರಿಹೋದರು. ಅವರಿಗೆ ಮಕ್ಕಳಿರಲಿಲ್ಲ. ಅವರ ಬದಲಿಗೆ ಎಲ್ಲಾಜಾರ್ ಮತ್ತು ಈತಾಮಾರ್ ಯಾಜಕರಾಗಿ ಸೇವೆಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದುದರಿಂದ ಎಲ್ಲಾಜಾರ್ ಈತಾಮಾರರು ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದದರಿಂದ ಎಲ್ಲಾಜಾರ್ ಈತಾಮಾರರು ಯಾಜಕೋದ್ಯೋಗವನ್ನು ನಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ನಾದಾಬ್ ಮತ್ತು ಅಬೀಹೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದುದರಿಂದ ಎಲಿಯಾಜರನೂ, ಈತಾಮಾರನೂ ಯಾಜಕ ಸೇವೆ ಮಾಡಿದರು. ಅಧ್ಯಾಯವನ್ನು ನೋಡಿ |
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”
ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.