Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:5 - ಪರಿಶುದ್ದ ಬೈಬಲ್‌

5 ಪ್ರತಿಯೊಂದು ಕುಲದಿಂದ ಚೀಟುಹಾಕುವುದರ ಮೂಲಕ ಜನರನ್ನು ಆರಿಸಿಕೊಳ್ಳಲಾಯಿತು. ಕೆಲವರನ್ನು ಪವಿತ್ರ ಸ್ಥಳದ ಸೇವೆಗಾಗಿ ಆರಿಸಿಕೊಳ್ಳಲಾಯಿತು; ಇನ್ನು ಕೆಲವರನ್ನು ಯಾಜಕರಾಗಿ ಸೇವೆಮಾಡಲು ಆರಿಸಿಕೊಳ್ಳಲಾಯಿತು; ಇವರೆಲ್ಲರೂ ಎಲ್ಲಾಜಾರ್ ಮತ್ತು ಈತಾಮಾರನ ಕುಲದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈ ವರ್ಗಗಳ ವಿಷಯವಾಗಿ ಚೀಟುಹಾಕಿ ಕೆಲಸವನ್ನು ವಹಿಸುತ್ತಿದ್ದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಯಲಯದ ಅಧಿಪತಿಗಳೂ ದೈವಿಕ ಕಾರ್ಯಗಳ ಅಧ್ಯಕ್ಷರೂ ಇದ್ದುದರಿಂದ ಉಭಯ ಸಂತಾನಗಳವರು ಸಮಾನ ಸ್ಥಾನದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯಾಧಿಪತಿಗಳೂ ದೈವಿಕಕಾರ್ಯಗಳ ಅಧ್ಯಕ್ಷರೂ ಇರುವದರಿಂದ ಉಭಯ ಸಂತಾನಗಳವರು ಸಮಾನಸ್ಥಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವರು ಸಹ ಚೀಟುಹಾಕುವ ಮೂಲಕ ನಿಷ್ಪಕ್ಷಪಾತವಾಗಿ ವಿಭಾಗವಾಗಿದ್ದರು. ಏಕೆಂದರೆ ಪರಿಶುದ್ಧ ಸ್ಥಾನದ ಪ್ರಧಾನರೂ, ದೇವರ ಪ್ರಧಾನರೂ ಎಲಿಯಾಜರನ ಪುತ್ರರೂ, ಈತಾಮಾರನ ಪುತ್ರರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:5
17 ತಿಳಿವುಗಳ ಹೋಲಿಕೆ  

ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೀಟುಹಾಕಿ ಆರಿಸಲಾಯಿತು. ಆರೋನನ ಸಂತತಿಯವರೂ ಯಾಜಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ ಚೀಟುಹಾಕಿ ವಿಶಿಷ್ಟ ಕಾರ್ಯಗಳಿಗಾಗಿ ಇವರನ್ನು ಆರಿಸಿಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ, ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ ಚೀಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು ಹಂಚಿದರು.


ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು.


ಅಲ್ಲಿ ಅನ್ನನು (ಪ್ರಧಾನ ಯಾಜಕ), ಕಾಯಫ, ಯೋಹಾನ ಮತ್ತು ಅಲೆಕ್ಸಾಂಡರ್ ಇದ್ದರು. ಪ್ರಧಾನಯಾಜಕನ ಕುಟುಂಬಕ್ಕೆ ಸೇರಿದ ಪ್ರತಿಯೊಬ್ಬರು ಅಲ್ಲಿದ್ದರು.


ಪೇತ್ರ ಮತ್ತು ಯೋಹಾನ ಜನರೊಂದಿಗೆ ಮಾತಾಡುತ್ತಿದ್ದಾಗ, ಕೆಲವು ಜನರು ಅವರ ಬಳಿಗೆ ಬಂದರು. ಅಲ್ಲಿ ಕೆಲವು ಯೆಹೂದ್ಯ ಯಾಜಕರಿದ್ದರು. ಕೆಲವು ಸದ್ದುಕಾಯರಿದ್ದರು ಮತ್ತು ದೇವಾಲಯ ಕಾಯುವ ಸಿಪಾಯಿಗಳ ಅಧಿಪತಿಯೂ ಇದ್ದನು.


ಬಳಿಕ ಅಪೊಸ್ತಲರು ಅವರಿಬ್ಬರಲ್ಲಿ ಒಬ್ಬನನ್ನು ಆರಿಸಿಕೊಳ್ಳಲು ಚೀಟಿಹಾಕಿದರು. ಚೀಟಿ ಮತ್ತೀಯನಿಗೆ ಬಂದದ್ದರಿಂದ ಹನ್ನೊಂದು ಮಂದಿಯೊಂದಿಗೆ ಅವನೂ ಅಪೊಸ್ತಲನಾದನು.


ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.


ಇತ್ತ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಪ್ರಧಾನಯಾಜಕನ ಭವನದಲ್ಲಿ ಸಭೆ ಸೇರಿದರು. ಪ್ರಧಾನಯಾಜಕನ ಹೆಸರು ಕಾಯಫ.


ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಆಪತ್ತು ಬಂತೆಂದು ತಿಳಿದುಕೊಳ್ಳಲು ಚೀಟು ಹಾಕೋಣ” ಅಂದರು. ಅವರು ಚೀಟು ಹಾಕಿದಾಗ ಆ ಚೀಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು.


ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.


ಮತ್ತು ಹಿಲ್ಕೀಯನ ಮಗನಾದ ಸೆರಾಯ. (ಹಿಲ್ಕೀಯನು ಮೆಷುಲ್ಲಾಮನ ಮಗನು; ಮೆಷುಲ್ಲಾಮನು ಚಾದೋಕನ ಮಗನು; ಚಾದೋಕನು ಮೆರಾಯೋತನ ಮಗನು; ಮೆರಾಯೋತನು ದೇವಾಲಯದ ಮೇಲ್ವಿಚಾರಕನಾಗಿದ್ದ ಅಹೀಟೂಬನ ಸಂತಾನಕ್ಕೆ ಸೇರಿದವನು.)


ಯೋಷೀಯನ ಆಡಳಿತಾಧಿಕಾರಿಗಳೂ ಯಾಜಕರಿಗೆ, ಲೇವಿಯರಿಗೆ ಮತ್ತು ಜನರಿಗೆ ಧಾರಾಳವಾಗಿ ಪಶುಗಳನ್ನು ಕೊಟ್ಟರು. ಮಹಾಯಾಜಕನಾದ ಹಿಲ್ಕೀಯ, ಜೆಕರ್ಯ ಮತ್ತು ಯೆಹೀಯೇಲನು ದೇವಾಲಯದ ಮುಖ್ಯಸ್ತರಾಗಿದ್ದರು. ಅವರು ಯಾಜಕರಿಗೆ ಎರಡು ಸಾವಿರದ ಆರು ನೂರು ಕುರಿಗಳನ್ನು ಮತ್ತು ಆಡುಗಳನ್ನು, ಮೂನ್ನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಗಳಿಗಾಗಿ ಕೊಟ್ಟರು.


ಅಜರ್ಯ. ಅಜರ್ಯನು ಹಿಲ್ಕೀಯನ ಮಗ; ಹಿಲ್ಕೀಯನು ಮೆಷುಲ್ಲಾಮನ ಮಗ; ಮೆಷುಲ್ಲಾಮನು ಚಾದೋಕನ ಮಗ; ಚಾದೋಕನು ಮೆರಾಯೋತನ ಮಗ; ಮೆರಾಯೋತನು ಅಹೀಟೂಬನ ಮಗ. ಅಹೀಟೂಬನು ದೇವಾಲಯದ ಒಬ್ಬ ವಿಶೇಷ ಅಧಿಕಾರಿಯಾಗಿದ್ದನು.


ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.


ಈತಾಮಾರನ ಸಂತತಿಗಿಂತಲೂ ಎಲ್ಲಾಜಾರನ ಸಂತತಿಯವರಲ್ಲಿ ಹೆಚ್ಚು ಮಂದಿ ನಾಯಕರಿದ್ದರು. ಎಲ್ಲಾಜಾರನ ಸಂತತಿಯವರಲ್ಲಿ ಹದಿನಾರು ಮಂದಿ ಮತ್ತು ಈತಾಮಾರನ ಸಂತತಿಯವರಲ್ಲಿ ಎಂಟು ಮಂದಿ ನಾಯಕರಿದ್ದರು.


ಪ್ರತಿಯೊಂದು ಕುಟುಂಬಕ್ಕೆ ಒಂದೊಂದು ದ್ವಾರದ ಜವಾಬ್ದಾರಿಕೆಯನ್ನು ಚೀಟುಹಾಕಿ ಕೊಡಲಾಯಿತು.


ಪ್ರತಿಯೊಬ್ಬರಿಗೂ ಕೆಲಸಗಳನ್ನು ಗೊತ್ತುಪಡಿಸಲು ಚೀಟುಹಾಕಿ ನೇಮಕ ಮಾಡಿದರು. ಅವರು ಯಾವ ಪಕ್ಷಪಾತವನ್ನೂ ಮಾಡಲಿಲ್ಲ. ದೊಡ್ಡವರು, ಚಿಕ್ಕವರು, ಉಪಾಧ್ಯಾಯರು, ವಿದ್ಯಾರ್ಥಿಗಳು ಎಂಬ ಬೇಧಭಾವವಿಲ್ಲದೆ ಆರಿಸಲ್ಪಟ್ಟರು.


ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನಾಶಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು