Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:6 - ಪರಿಶುದ್ದ ಬೈಬಲ್‌

6 ನೆತನೇಲನ ಮಗನಾದ ಶೆಮಾಯನು ಲೇಖಕನಾಗಿದ್ದನು. ಶೆಮಾಯನು ಲೇವಿ ಸಂತತಿಗೆ ಸೇರಿದವನಾಗಿದ್ದನು. ಇವನು ವಂಶಾವಳಿಯನ್ನು ಬರೆದಿಡುತ್ತಿದ್ದನು. ಅರಸನಾದ ದಾವೀದನ ಮತ್ತು ಯಾಜಕರಾದ ಚಾದೋಕನ, ಅಹೀಮೆಲೆಕನ ಮತ್ತು ಲೇವಿಯರ ನಾಯಕರ ಎದುರಿನಲ್ಲಿ ಸಂತತಿಯವರನ್ನು ಬರೆದನು. ಪ್ರತಿಸಲ ಚೀಟುಹಾಕಿ ಒಬ್ಬನನ್ನು ಒಂದು ಕೆಲಸಕ್ಕೆ ಆರಿಸಿದಾಗ ಅವನ ಹೆಸರನ್ನು ವಂಶಾವಳಿಯಲ್ಲಿ ಬರೆದನು. ಹೀಗೆ ಒಬ್ಬೊಬ್ಬನು ಯಾವಯಾವ ಕೆಲಸಗಳನ್ನು ಮಾಡಬೇಕೆಂದು ಎಲ್ಲರಿಗೂ ಗೊತ್ತುಪಡಿಸಿದರು. ಈ ರೀತಿಯಾಗಿ ಎಲ್ಲಾಜಾರ್ ಮತ್ತು ಈತಾಮಾರ್ ಕುಟುಂಬದವರಿಗೆ ಯಾಜಕೋದ್ಯೋಗವನ್ನು ಮಾಡುವಂತೆ ವರ್ಗಗಳಾಗಿ ಪ್ರತ್ಯೇಕಿಸಿ ಕೆಲಸಗಳನ್ನು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೆತನೇಲನ ಮಗ ಶೆಮಾಯನೆಂಬ ಲೇವಿಯ ಲೇಖಕನು, ಅರಸನ ಮುಂದೆ, ಅಧಿಪತಿಗಳ ಮುಂದೆ ಹಾಗೂ ಯಾಜಕನಾದ ಚಾದೋಕ್, ಎಬ್ಯಾತಾರನ ಮಗ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬಗಳ ಮುಖ್ಯಸ್ಥರ ಮುಂದೆ, ಆ ವರ್ಗಗಳ ಪಟ್ಟಿಯನ್ನು ಬರೆಯುತ್ತಿದ್ದನು. ಎಲ್ಲಾಜಾರ್ಯರ ಒಂದು ವರ್ಗದವರ ಸರದಿ ಆದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವೆಸಲ್ಲಿಸಬೇಕೆಂದು ನೇಮಿಸಿ, ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇವಿುಸಿ ಎಲ್ಲಾ ವರ್ಗಗಳ ಸರತಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೆಯೇಲ್ ಇವನ ಮಗ ಲೇಖಕನಾದ ಶೆಮಾಯನು ಅರಸನ ಮುಂದೆಯೂ; ಪ್ರಧಾನರು, ಯಾಜಕನಾದ ಚಾದೋಕನು, ಅಬಿಯಾತರನ ಮಗ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಅವರ ಹೆಸರುಗಳನ್ನು ಬರೆದನು. ಎಲಿಯಾಜರನಿಗೋಸ್ಕರ ಒಂದು ಶ್ರೇಷ್ಠ ಮನೆ ತೆಗೆದುಕೊಳ್ಳಲಾಯಿತು. ಅದರಂತೆಯೇ, ಈತಾಮಾರನಿಗೋಸ್ಕರವೂ ಒಂದು ತೆಗೆದುಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:6
12 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು.


ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.


ಆಗ ಧರ್ಮೋಪದೇಶಕನು ಯೇಸುವಿನ ಬಳಿಗೆ ಬಂದು, “ಬೋಧಕನೇ, ನೀನು ಯಾವ ಸ್ಥಳಕ್ಕೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು.


ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು ಕೇಳಿಕೊಂಡರು.


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ಇವರೇ ಲೇವಿಯರ ಸಂತತಿಯವರು. ಇವರೇ ಆಯಾ ಕುಟುಂಬಗಳ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಮಾತ್ರ ಲೆಕ್ಕಿಸಲಾಯಿತು. ಅವರು ದೇವಾಲಯದಲ್ಲಿ ಸೇವೆಮಾಡಿದರು.


ಶೀಷನ ಮಕ್ಕಳಾದ ಎಲೀಹೋರೆಫ್ ಮತ್ತು ಅಹೀಯಾಹು; ಇವರಿಬ್ಬರೂ ನ್ಯಾಯಾಲಯದಲ್ಲಿ ನಡೆದ ಸಂಗತಿಗಳ ಕುರಿತಾಗಿ ಟಿಪ್ಪಣಿ ಬರೆಯುವ ಉದ್ಯೋಗವನ್ನು ಹೊಂದಿದ್ದರು. ಅಹೀಲೂದನ ಮಗನಾದ ಯೆಹೋಷಾಫಾಟನು ಜನರ ಇತಿಹಾಸದ ಕುರಿತು ಟಿಪ್ಪಣಿ ಬರೆದನು.


ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.


ಮೊದಲನೆಯ ವರ್ಗ ಯೆಹೋಯಾರೀಬನದು. ಎರಡನೆಯ ವರ್ಗ ಯೆದಾಯನದು.


ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೀಟುಹಾಕಿ ಆರಿಸಲಾಯಿತು. ಆರೋನನ ಸಂತತಿಯವರೂ ಯಾಜಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ ಚೀಟುಹಾಕಿ ವಿಶಿಷ್ಟ ಕಾರ್ಯಗಳಿಗಾಗಿ ಇವರನ್ನು ಆರಿಸಿಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ, ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ ಚೀಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು ಹಂಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು