1 ಪೂರ್ವಕಾಲ ವೃತ್ತಾಂತ 25:1 - ಪರಿಶುದ್ದ ಬೈಬಲ್1 ದಾವೀದನೂ ಸೇನಾಪತಿಗಳೂ ಆಸಾಫನ ಸಂತತಿಯವರನ್ನು ವಿಶೇಷವಾದ ಸೇವೆಗೆ ಪ್ರತ್ಯೇಕಿಸಿದರು. ಆಸಾಫನ ಗಂಡುಮಕ್ಕಳು ಹೇಮಾನ್ ಮತ್ತು ಯೆದುತೂನ್. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸುತ್ತಾ ದೇವರ ಸಂದೇಶವನ್ನು ಪ್ರವಾದಿಸುವುದೇ ಇವರ ಸೇವೆಯಾಗಿತ್ತು. ಈ ರೀತಿಯಾಗಿ ದೇವರ ಸೇವೆಯನ್ನು ಮಾಡಿದವರು ಯಾರೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಮೇಲೆ ದಾವೀದನೂ ಆರಾಧಕಮಂಡಲಿಯವರ ಪ್ರಧಾನರೂ ಕಿನ್ನರಿ ಸ್ವರಮಂಡಲ ತಾಳ ಇವುಗಳನ್ನು ಬಾರಿಸುತ್ತಾ ಪರವಶರಾಗಿ ಗಾಯನ ಸೇವೆಮಾಡುವದಕ್ಕೋಸ್ಕರ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದಲ್ಲದೆ ದಾವೀದನೂ, ಸೈನ್ಯಾಧಿಪತಿಗಳೂ ಆಸಾಫ್, ಹೇಮಾನ್, ಯೆದುತೂನ್; ಇವರ ಪುತ್ರರಲ್ಲಿ ಕಿನ್ನರಿಗಳಿಂದಲೂ, ವೀಣೆಗಳಿಂದಲೂ, ತಾಳಗಳಿಂದಲೂ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರವಾಗಿತ್ತು. ಅಧ್ಯಾಯವನ್ನು ನೋಡಿ |
ಕೆಲಸಗಾರರು ನಂಬಿಗಸ್ತಿಕೆಯಿಂದ ಕೆಲಸ ಮಾಡಿದರು. ಅವರು ಮೇಲ್ವಿಚಾರಕರು ಯಹತ್ ಮತ್ತು ಓಬದ್ಯ. ಇವರು ಲೇವಿಯರಾಗಿದ್ದರು ಮತ್ತು ಮೆರಾರೀಯ ಸಂತತಿಯವರಾಗಿದ್ದರು. ಇತರ ಮೇಲ್ವಿಚಾರಕರು ಯಾರೆಂದರೆ: ಜೆಕರ್ಯ ಮತ್ತು ಮೆಷುಲ್ಲಾಮ್. ಇವರು ಕೆಹಾತ್ಯನ ಸಂತತಿಯವರಾಗಿದ್ದರು. ವಾದ್ಯಗಳನ್ನು ಬಾರಿಸುವುದರಲ್ಲಿ ನಿಪುಣರಾದ ಲೇವಿಯರೂ ಕೆಲಸದ ಮೇಲ್ವಿಚಾರಣೆ ಮಾಡುತ್ತಿದ್ದರು. ಇತರ ಕೆಲವು ಲೇವಿಯರು, ಆ ಯೋಜನೆಯ ಅಧಿಕಾರಿಗಳಾಗಿಯೂ ಕಾರ್ಯದರ್ಶಿಗಳಾಗಿಯೂ ದ್ವಾರಪಾಲಕರಾಗಿಯೂ ನೇಮಕ ಮಾಡಲ್ಪಟ್ಟವರಾಗಿದ್ದರು.
ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.
ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.
ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.
ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು.