3 ಯೆದುತೂನನ ಸಂತತಿಯವರಲ್ಲಿ: ಗೆದಲ್ಯ, ಜೇರಿ, ಯೆಶಾಯ, ಶಿಮ್ಮೀ, ಹಷಬ್ಯ ಮತ್ತು ಮತ್ತಿತ್ಯ. ಒಟ್ಟು ಅವನ ಆರು ಮಂದಿ ಮಕ್ಕಳು ತಮ್ಮ ತಂದೆಯಾದ ಯೆದುತೂನನೊಂದಿಗೆ ಹಾರ್ಪ್ ವಾದ್ಯಗಳನ್ನು ಬಾರಿಸಿ ದೇವರ ಸಂದೇಶವನ್ನು ತಿಳಿಸಿದರು ಮತ್ತು ದೇವರಿಗೆ ಕೃತಜ್ಞತಾಸ್ತುತಿಯನ್ನು ಅರ್ಪಿಸಿದರು.
3 ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಇವರು ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ, ಸರ್ವೇಶ್ವರನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿ ಸಹಾಯಕರು.
3 ಯೆದುತೂನನ ಪುತ್ರರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಈ ಆರು ಮಂದಿಯು ಯೆದುತೂನನ ಪುತ್ರರು. ತಮ್ಮ ತಂದೆ ಯೆದುತೂನನ ಕೈಕೆಳಗೆ ಕಿನ್ನರಿಗಳನ್ನು ಬಾರಿಸಿ, ಯೆಹೋವ ದೇವರನ್ನು ಕೊಂಡಾಡಿ, ಸ್ತುತಿಸಿ ಪ್ರವಾದಿಸುತ್ತಿದ್ದರು.
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
ಲೇವಿಯರ ಇನ್ನೊಂದು ಗುಂಪು ಇತ್ತು. ಅವರು ಯಾರೆಂದರೆ: ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರೆಲ್ಲಾ ಲೇವಿಯರ ಕಾವಲುಗಾರರಾಗಿದ್ದರು.
ಆಸಾಫನ ಸಂತತಿಯಲ್ಲಿ: ಜಕ್ಕೂರ್, ಯೋಸೇಫ್, ನೆತನ್ಯ ಮತ್ತು ಅಶರೇಲ, ಅರಸನಾದ ದಾವೀದನು ಆಸಾಫನನ್ನು ಪ್ರವಾದಿಸುವುದಕ್ಕಾಗಿ ಆರಿಸಿಕೊಂಡನು. ಆಸಾಫನು ತನ್ನ ಮಕ್ಕಳಿಗೂ ಮಾರ್ಗದರ್ಶನ ನೀಡಿದನು.
ನಂತರ ನೀನು ಗಿಬಿಯತ್ ಎಲೋಹಿಮಿಗೆ ಹೋಗುವೆ. ಅಲ್ಲಿ ಒಂದು ಫಿಲಿಷ್ಟಿಯರ ಕೋಟೆಯಿದೆ. ನೀನು ಆ ಪಟ್ಟಣಕ್ಕೆ ಬಂದಾಗ, ಪ್ರವಾದಿಗಳ ಗುಂಪೊಂದು ಹೊರಬರುತ್ತದೆ. ಈ ಪ್ರವಾದಿಗಳು ಆರಾಧನಾ ಸ್ಥಳದಿಂದ ಇಳಿದು ಬರುತ್ತಾರೆ, ಅವರು ಪ್ರವಾದಿಸುತ್ತಿರುತ್ತಾರೆ. ಅವರು ಸ್ವರಮಂಡಲವನ್ನೂ ದಮ್ಮಡಿಯನ್ನೂ ಕೊಳಲನ್ನೂ ಕಿನ್ನರಿಯನ್ನೂ ನುಡಿಸುತ್ತಿರುತ್ತಾರೆ.