1 ಪೂರ್ವಕಾಲ ವೃತ್ತಾಂತ 25:5 - ಪರಿಶುದ್ದ ಬೈಬಲ್5 ಇವರೆಲ್ಲರೂ ಹೇಮಾನನ ಮಕ್ಕಳು. ಹೇಮಾನನು ದಾವೀದನ ಪ್ರವಾದಿಯಾಗಿದ್ದನು. ಅವನನ್ನು ಬಲಿಷ್ಠನನ್ನಾಗಿ ಮಾಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳೂ ಮೂವರು ಹೆಣ್ಣುಮಕ್ಕಳೂ ಹುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇವರೆಲ್ಲರು ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, “ನೀನು ಅಭಿವೃದ್ಧಿ ಹೊಂದುವಹಾಗೆ ಮಾಡುವೆನು” ಎಂಬುದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ, ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇವರೆಲ್ಲರೂ ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಅವನಿಗೆ, “ನೀನು ಅಭಿವೃದ್ಧಿಯಾಗುವ ಹಾಗೆ ಮಾಡುವೆನು,” ಎಂಬುದಾಗಿ ವಾಗ್ದಾನ ಮಾಡಿದ್ದರು. ಅದರಂತೆಯೇ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳನ್ನೂ ಮೂರು ಮಂದಿ ಹೆಣ್ಣುಮಕ್ಕಳನ್ನೂ ದಯಪಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವರು ಅವನಿಗೆ - ನೀನು ಅಭಿವೃದ್ಧಿಯಾಗುವ ಹಾಗೆ ಮಾಡುವೆನು ಎಂಬದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳನ್ನೂ ಮೂರು ಮಂದಿ ಹೆಣ್ಣುಮಕ್ಕಳನ್ನೂ ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೇಮಾನನ ಪುತ್ರರು. ದೇವರು ಹೇಮಾನನಿಗೆ ಹದಿನಾಲ್ಕು ಮಂದಿ ಪುತ್ರರನ್ನೂ, ಮೂರು ಮಂದಿ ಪುತ್ರಿಯರನ್ನೂ ಕೊಟ್ಟಿದ್ದರು. ಅಧ್ಯಾಯವನ್ನು ನೋಡಿ |