1 ಪೂರ್ವಕಾಲ ವೃತ್ತಾಂತ 26:1 - ಪರಿಶುದ್ದ ಬೈಬಲ್1 ಕೋರಹಿಯ ವಂಶದವರಲ್ಲಿ ದ್ವಾರಪಾಲಕರು ಯಾರೆಂದರೆ: ಮೆಷೆಲೆಮ್ಯ ಮತ್ತು ಅವನ ಗಂಡುಮಕ್ಕಳು. (ಮೆಷೆಲೆಮ್ಯನು ಕೋರಹಿಯನ ಮಗ. ಕೋರಹಿಯನು ಆಸಾಫನ ಕುಲದವನಾಗಿದ್ದನು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವಾಲಯದ ಕಾವಲುಗಾರರಾಗಿ ಸೇವೆಮಾಡಲು ನೇಮಕಗೊಂಡ ಲೇವಿಯರ ಹೆಸರುಗಳು: ಕೋರಹೀಯನಾದ ಮೆಷೆಲೆಮ್ಯ; ಇವನು ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದ್ವಾರಪಾಲಕವರ್ಗಗಳ ವಿಷಯ ಕೋರಹೀಯನಾದ ಮೆಷೆಲೆಮ್ಯ ಎಂಬವನು ಕೊರೇಯನ ಮಗನೂ ಆಸಾಫನ ಮೊಮ್ಮಗನೂ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದ್ವಾರಪಾಲಕರ ವರ್ಗಗಳು: ಕೋರಹಿಯರೊಳಗೆ: ಆಸಾಫನ ಪುತ್ರರಲ್ಲಿ ಒಬ್ಬನಾಗಿರುವ ಕೋರೆಯ ಮಗನಾದ ಮೆಷೆಲೆಮ್ಯನು. ಅಧ್ಯಾಯವನ್ನು ನೋಡಿ |
ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.