1 ಪೂರ್ವಕಾಲ ವೃತ್ತಾಂತ 26:12 - ಪರಿಶುದ್ದ ಬೈಬಲ್12 ಇವರೆಲ್ಲಾ ದೇವಾಲಯದ ದ್ವಾರಪಾಲಕರಾಗಿದ್ದರು. ಅದರಲ್ಲಿ ಸೇವೆಮಾಡುತ್ತಿರುವ ಇತರರಂತೆಯೇ ಇವರೂ ದೇವಾಲಯದ ದ್ವಾರಗಳನ್ನು ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈ ದ್ವಾರಪಾಲಕ ವರ್ಗಗಳ ಪ್ರಧಾನ ಪುರುಷರು ತಮ್ಮ ಕುಲಬಂಧುಗಳಂತೆ ಸರ್ವೇಶ್ವರನ ಆಲಯದಲ್ಲಿ ಸೇವೆಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಈ ದ್ವಾರಪಾಲಕವರ್ಗಗಳ ಪ್ರಧಾನ ಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದರಲ್ಲಿ ದ್ವಾರಪಾಲಕರ ವರ್ಗಗಳು ಯೆಹೋವ ದೇವರ ಆಲಯದಲ್ಲಿ ಸೇವೆ ಮಾಡುವುದಕ್ಕೆ ವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲಾಗಿದ್ದವು. ಅಧ್ಯಾಯವನ್ನು ನೋಡಿ |
ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.