1 ಪೂರ್ವಕಾಲ ವೃತ್ತಾಂತ 26:13 - ಪರಿಶುದ್ದ ಬೈಬಲ್13 ಪ್ರತಿಯೊಂದು ಕುಟುಂಬಕ್ಕೆ ಒಂದೊಂದು ದ್ವಾರದ ಜವಾಬ್ದಾರಿಕೆಯನ್ನು ಚೀಟುಹಾಕಿ ಕೊಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು, ಕನಿಷ್ಠ ಕುಟುಂಬವೆಂದಾಗಲಿ ಶ್ರೇಷ್ಠ ಕುಟುಂಬವೆಂದಾಗಲಿ ವ್ಯತ್ಯಾಸಮಾಡದೆ, ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ಕನಿಷ್ಠ ಕುಟುಂಬವೆಂದೂ ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಕಿರಿಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಿಲಿಂದ ಬಾಗಿಲಿಗೂ ಚೀಟುಗಳನ್ನು ಹಾಕಿದರು. ಅಧ್ಯಾಯವನ್ನು ನೋಡಿ |
ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೀಟುಹಾಕಿ ಆರಿಸಲಾಯಿತು. ಆರೋನನ ಸಂತತಿಯವರೂ ಯಾಜಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ ಚೀಟುಹಾಕಿ ವಿಶಿಷ್ಟ ಕಾರ್ಯಗಳಿಗಾಗಿ ಇವರನ್ನು ಆರಿಸಿಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ, ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ ಚೀಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು ಹಂಚಿದರು.