1 ಪೂರ್ವಕಾಲ ವೃತ್ತಾಂತ 26:16 - ಪರಿಶುದ್ದ ಬೈಬಲ್16 ಶುಪ್ಪೀಮ್ ಮತ್ತು ಹೋಸ ಎಂಬವರಿಗೆ ಪಶ್ಚಿಮದ ಬಾಗಿಲನ್ನು ಮತ್ತು ಮೇಲ್ದಾರಿಯಲ್ಲಿದ್ದ ಶೆಲ್ಲೆಕೆತ್ ಬಾಗಿಲನ್ನು ಕಾಯುವ ಕೆಲಸ ದೊರೆಯಿತು. ಕಾವಲುಗಾರರು ಪಕ್ಕಪಕ್ಕದಲ್ಲಿಯೇ ನಿಂತುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಶುಪ್ಪೀಮ್ ಮತ್ತು ಹೋಸ ಎಂಬುವರಿಗೆ ಪಶ್ಚಿಮದ ಬಾಗಿಲೂ ಅದರ ಸಮೀಪದಲ್ಲಿರುವ ಶಲ್ಲೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಶುಪ್ಪೀಮ್, ಹೋಸ ಎಂಬವರಿಗೆ ಪಶ್ಚಿಮ ಬಾಗಿಲೂ ಅದರ ಸಮೀಪದಲ್ಲಿರುವ ಶೆಲ್ಲೆಕೆತೆಂಬ ಬಾಗಿಲೂ ಚೀಟಿನಿಂದ ನೇಮಕವಾಗಿದ್ದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೋಸ ಎಂಬವರಿಗೆ ಪಡುವಣ ಬಾಗಲೂ ಅದರ ಸಮೀಪದಲ್ಲಿರುವ ಶೆಲ್ಲೆಕೆತೆಂಬ ಬಾಗಲೂ ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಲು [ಪಟ್ಟಣದಿಂದ ದೇವಾಲಯಕ್ಕೆ] ಏರಿಹೋಗುವ ದಾರಿಯಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಶುಪ್ಪೀಮ್, ಹೋಸ ಎಂಬವರಿಗೆ ಪಶ್ಚಿಮದಲ್ಲಿರುವ ಶೆಲ್ಲೆಕೆತ್ ಎಂಬ ಬಾಗಿಲು ಬಂತು. ಅವು ಮೇಲಕ್ಕೆ ಹೋಗುವ ರಾಜಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು. ಅಧ್ಯಾಯವನ್ನು ನೋಡಿ |