1 ಪೂರ್ವಕಾಲ ವೃತ್ತಾಂತ 26:32 - ಪರಿಶುದ್ದ ಬೈಬಲ್32 ಯೆರೀಯನಿಗೆ ಎರಡು ಸಾವಿರದ ಏಳುನೂರು ಮಂದಿ ಸಂಬಂಧಿಕರಿದ್ದರು. ಇವರೆಲ್ಲಾ ಬಲಾಢ್ಯರೂ ಕುಟುಂಬಕ್ಕೆ ನಾಯಕರುಗಳೂ ಆಗಿದ್ದರು. ದಾವೀದನು ಇವರೆಲ್ಲರಿಗೂ ರೂಬೇನ್, ಗಾದ್, ಅರ್ಧಮನಸ್ಸೆಯವರ ಪ್ರಾಂತ್ಯಗಳಲ್ಲಿ ಯೆಹೋವನಿಗೆ ಸಂಬಂಧಿಸಿದ ಕಾರ್ಯಗಳನ್ನು, ರಾಜನಿಗೆ ಸಂಬಂಧಿಸಿದ ಕಾರ್ಯಗಳನ್ನು ಮಾಡಲು ನೇಮಕ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಶ್ರೀಮಂತರೂ ಕುಟುಂಬಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಮಂದಿ ಇದ್ದರು. ಅರಸ ದಾವೀದನು ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲೂ ರಾಜಕೀಯ ಕಾರ್ಯಗಳಲ್ಲೂ ಅಧಿಕಾರಿಗಳನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳು ನೂರು ಮಂದಿ. ಅರಸನಾದ ದಾವೀದನು ರೂಬೇನ್ ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕಕಾರ್ಯಗಳಲ್ಲಿಯೂ ರಾಜಕೀಯಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇವಿುಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇದಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಕುಟುಂಬಗಳ ಮುಖ್ಯಸ್ಥರಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ರೂಬೇನ್ಯರ ಮೇಲೆಯೂ, ಗಾದ್ಯರ ಮೇಲೆಯೂ, ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳಾಗಿ ಮಾಡಿದನು. ಅಧ್ಯಾಯವನ್ನು ನೋಡಿ |
ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೀಟುಹಾಕಿ ಆರಿಸಲಾಯಿತು. ಆರೋನನ ಸಂತತಿಯವರೂ ಯಾಜಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ ಚೀಟುಹಾಕಿ ವಿಶಿಷ್ಟ ಕಾರ್ಯಗಳಿಗಾಗಿ ಇವರನ್ನು ಆರಿಸಿಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ, ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ ಚೀಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು ಹಂಚಿದರು.