Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:6 - ಪರಿಶುದ್ದ ಬೈಬಲ್‌

6 ಶೆಮಾಯನಿಗೂ ಗಂಡುಮಕ್ಕಳಿದ್ದರು. ಅವರು ಧೈರ್ಯಶಾಲಿಗಳೂ ಬಲಶಾಲಿಗಳೂ ಆಗಿದ್ದದರಿಂದ ತಂದೆಯ ಕುಲದಲ್ಲಿ ನಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನ ಮಗ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಪುತ್ರರು ಹುಟ್ಟಿದರು, ಅವರು ಪರಾಕ್ರಮಶಾಲಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:6
10 ತಿಳಿವುಗಳ ಹೋಲಿಕೆ  

ನಮಗಿರುವ ತೊಂದರೆಗಳಲ್ಲಿ ನೀನೂ ಪಾಲುಗಾರನಾಗು. ಕ್ರಿಸ್ತ ಯೇಸುವಿನ ನಿಜವಾದ ಸೈನಿಕನಂತೆ ಆ ತೊಂದರೆಗಳನ್ನು ಸ್ವೀಕರಿಸು.


ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.


ಈ ವಂಶದವರ ಒಟ್ಟು ಸಂಖ್ಯೆ ನೂರ ಇಪ್ಪತ್ತೆಂಟು ಮಂದಿ. (ಇವರೆಲ್ಲಾ ಧೈರ್ಯಶಾಲಿಗಳಾದ ಯುದ್ಧ ಯೋಧರು. ಇವರ ಮುಖ್ಯಸ್ಥನು ಹಗ್ಗೆದೋಲೀಮನ ಮಗನಾದ ಜಬ್ದೀಯೇಲ.)


ಆಗ ಮಹಾಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಸೇವೆಮಾಡುವ ಯಾಜಕರೂ ಉಜ್ಜೀಯನಿಗೆ,


ಈ ಎಲ್ಲಾಜನರೂ, ಓಬೇದೆದೋಮನ ಸಂತತಿಯವರು. ಇವರೆಲ್ಲಾ ಬಲಶಾಲಿಗಳಾಗಿದ್ದರು. ಒಳ್ಳೆಯ ಅನುಭವಸ್ಥ ದ್ವಾರಪಾಲಕರಾಗಿದ್ದರು. ಓಬೇದೆದೋಮನ ಸಂತತಿಯವರ ಒಟ್ಟು ಸಂಖ್ಯೆ ಅರವತ್ತೆರಡು ಮಂದಿ.


ಆ ಗುಂಪಿನಲ್ಲಿ ಚಾದೋಕನೂ ಇದ್ದನು. ಇವನೂ ಪರಾಕ್ರಮಶಾಲಿಯಾಗಿದ್ದನು. ಇವನು ತನ್ನ ಇಪ್ಪತ್ತೆರಡು ಮಂದಿ ಅಧಿಕಾರಿಗಳೊಂದಿಗೆ ಸೇರಿದನು.


ನಿಮ್ಮ ಒಡೆಯನಾದ ಸೌಲನು ಮರಣ ಹೊಂದಿರುವುದರಿಂದ, ಯೆಹೂದ ಕುಲದವರು ನನ್ನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆ. ಆದ್ದರಿಂದ ನೀವು ಬಲಿಷ್ಠರಾಗಿರಿ ಮತ್ತು ಧೈರ್ಯದಿಂದಿರಿ” ಎಂದು ಹೇಳಿಸಿದನು.


ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಎಂದು ಹೇಳಿದನು.


ಆರನೆಯವನು ಅಮ್ಮೀಯೇಲ; ಏಳನೆಯವನು ಇಸ್ಸಾಕಾರ್; ಎಂಟನೆಯವನು ಪೆಯುಲ್ಲೆತೈ. ದೇವರು ಓಬೇದೆದೋಮನನ್ನು ಅತಿಯಾಗಿ ಆಶೀರ್ವದಿಸಿದನು.


ಶೆಮಾಯನ ಮಕ್ಕಳು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್, ಎಲೀಹು ಮತ್ತು ಸಮಕ್ಯ. ಎಲ್ಜಾಬಾದನ ಸಂಬಂಧಿಕರು ಕುಶಲ ಕರ್ಮಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು