Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:1 - ಪರಿಶುದ್ದ ಬೈಬಲ್‌

1 ಅರಸನ ಸೈನ್ಯದಲ್ಲಿ ಸೇವೆಮಾಡಿದವರ ಪಟ್ಟಿ. ಒಂದೊಂದು ತಂಡದವರು, ಇಸ್ರೇಲಿನ ಸೈನ್ಯಾಧಿಕಾರಿಗಳು, ಸಹಸ್ರಾಧಿಪತಿಗಳು ಮತ್ತು ಇತರ ಅಧಿಕಾರಿಗಳು ವರ್ಷದ ಆಯಾ ತಿಂಗಳಲ್ಲಿ ತಮ್ಮ ತಂಡದ ಸರದಿಯ ಪ್ರಕಾರ ಅರಸನ ವಿವಿಧ ಸೇವೆಮಾಡುತ್ತಿದ್ದರು. ಸೈನ್ಯದ ಪ್ರತಿಯೊಂದು ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಪುರುಷರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ವಿವಿಧ ಸೇವೆಯನ್ನು ಮಾಡಬೇಕಾಗಿದ್ದ ವರ್ಗಗಳ ಅಧಿಪತಿಗಳು ಹಾಗು ಇವರ ಕಾರ್ಯಕ್ರಮಗಳ ಪಟ್ಟಿ: ವರ್ಷದ ಎಲ್ಲಾ ತಿಂಗಳುಗಳಲ್ಲಿ, ತಿಂಗಳಿಗೆ ಒಂದು ವರ್ಗದಂತೆ, ಸರದಿಯ ಮೇಲೆ ಕೆಲಸಕ್ಕಾಗಿ ಬರುತ್ತಿದ್ದ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳು ಇವರ ಲೆಕ್ಕ. ವರುಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರತಿಯ ಮೇಲೆ ಕೆಲಸಕ್ಕೋಸ್ಕರ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು. ಹೇಗೆಂದರೆ, ಕುಟುಂಬಗಳ ಮುಖ್ಯಸ್ಥರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಅಧಿಪತಿಗಳೂ ವರ್ಷದ ಎಲ್ಲಾ ತಿಂಗಳುಗಳಲ್ಲಿ ಪ್ರತಿ ತಿಂಗಳು ಸರತಿಯಂತೆ ಬರುತ್ತಿದ್ದ ವರ್ಗಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿವರ್ಗದಲ್ಲಿ 24,000 ಮಂದಿಯಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:1
18 ತಿಳಿವುಗಳ ಹೋಲಿಕೆ  

ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.


ದಾವೀದನು ತನ್ನ ಎಲ್ಲಾ ಸೇನಾಧಿಪತಿಗಳೊಂದಿಗೆ ಮಾತನಾಡಿದನು. ಅವನು ಸಹಸ್ರಾಧಿಪತಿಗಳೊಂದಿಗೆ, ಶತಾಧಿಪತಿಗಳೊಂದಿಗೆ ಮತ್ತು ಪ್ರತಿಯೊಬ್ಬ ನಾಯಕನೊಂದಿಗೆ ಚರ್ಚಿಸಿದನು.


ರಾಜನಾದ ಸೊಲೊಮೋನನು ಅದೋನೀರಾಮ ಎಂಬವನನ್ನು ಇವರಿಗೆ ಮೇಲ್ವಿಚಾರಕನನ್ನಾಗಿ ನೇಮಿಸಿದನು. ಸೊಲೊಮೋನನು ಅವರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಒಂದೊಂದು ಗುಂಪಿನಲ್ಲಿ ಹತ್ತು ಸಾವಿರ ಜನರಿದ್ದರು. ಪ್ರತಿಯೊಂದು ಗುಂಪಿನವರು ಲೆಬನೋನಿನಲ್ಲಿ ಒಂದು ತಿಂಗಳು ಕೆಲಸ ಮಾಡಿದ ನಂತರ ಎರಡು ತಿಂಗಳು ಮನೆಗೆ ಹಿಂತಿರುಗುತ್ತಿದ್ದರು.


ರಾಜನಾದ ಸೊಲೊಮೋನನಿಗೆ ಪ್ರತಿ ತಿಂಗಳಿಗೆ ಬೇಕಾದ ವಸ್ತುಗಳನ್ನು ಅವನ ಹನ್ನೆರಡು ಮಂದಿ ರಾಜ್ಯಪಾಲರಲ್ಲಿ ಒಬ್ಬರು ಸರದಿಯ ಪ್ರಕಾರ ಕೊಡುತ್ತಿದ್ದರು. ರಾಜನಿಗೂ ಅವನ ಪಂಕ್ತಿಯಲ್ಲಿ ಊಟಮಾಡುವ ಪ್ರತಿಯೊಬ್ಬರಿಗೂ ಆಹಾರಪದಾರ್ಥಗಳು ಯಥೇಚ್ಛವಾಗಿರುತ್ತಿದ್ದವು.


ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಆಹಾರಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಆಹಾರಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು.


“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.


“ಆದ್ದರಿಂದ, ನಿಮ್ಮ ಕುಲಗಳಿಂದ ನೀವು ಆರಿಸಿಕೊಂಡ ಬುದ್ಧಿವಂತರಾದ ಮತ್ತು ಅನುಭವಸ್ಥರಾದ ಜನರನ್ನು ನಾನು ನೇಮಿಸಿದೆನು. ಈ ರೀತಿಯಾಗಿ ಅವರನ್ನು ಸಾವಿರ ಜನರ ಮೇಲೆಯೂ, ನೂರು ಜನರ ಮೇಲೆಯೂ, ಐವತ್ತು ಜನರ ಮೇಲೆಯೂ ಮತ್ತು ಹತ್ತು ಜನರ ಮೇಲೆಯೂ ನಾಯಕರನ್ನಾಗಿ ನೇಮಿಸಿದೆನು. ಅಲ್ಲದೆ ನಿಮ್ಮನಿಮ್ಮ ಕುಲಗಳಿಗೆ ಪ್ರಧಾನರನ್ನೂ ನೇಮಿಸಿದೆನು.


ಮೋಶೆಯು ಇಸ್ರೇಲರೊಳಗಿಂದ ನೀತಿವಂತರನ್ನು ಆರಿಸಿಕೊಂಡು ಅವರನ್ನು ಹೀಗೆ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ಮಾಡಿದನು


ಯೆರೀಯನಿಗೆ ಎರಡು ಸಾವಿರದ ಏಳುನೂರು ಮಂದಿ ಸಂಬಂಧಿಕರಿದ್ದರು. ಇವರೆಲ್ಲಾ ಬಲಾಢ್ಯರೂ ಕುಟುಂಬಕ್ಕೆ ನಾಯಕರುಗಳೂ ಆಗಿದ್ದರು. ದಾವೀದನು ಇವರೆಲ್ಲರಿಗೂ ರೂಬೇನ್, ಗಾದ್, ಅರ್ಧಮನಸ್ಸೆಯವರ ಪ್ರಾಂತ್ಯಗಳಲ್ಲಿ ಯೆಹೋವನಿಗೆ ಸಂಬಂಧಿಸಿದ ಕಾರ್ಯಗಳನ್ನು, ರಾಜನಿಗೆ ಸಂಬಂಧಿಸಿದ ಕಾರ್ಯಗಳನ್ನು ಮಾಡಲು ನೇಮಕ ಮಾಡಿದನು.


ಮೊದಲನೆಯ ತಿಂಗಳಲ್ಲಿ ಕಾರ್ಯಾಚರಣೆಯಲ್ಲಿರಬೇಕಾದ ತಂಡಕ್ಕೆ ಯಾಷೊಬ್ಬಾಮನು ಮುಖ್ಯಸ್ತನಾಗಿದ್ದನು. ಇವನು ಜಬ್ದೀಯೇಲನ ಮಗನಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.


ಆಗ ಇಸ್ರೇಲರ ಕುಲಪ್ರಧಾನರು, ಕುಟುಂಬಗಳ ನಾಯಕರು, ಪ್ರಧಾನಸೇನಾಧಿಪತಿಗಳು, ಸೇನಾಧಿಪತಿಗಳು, ರಾಜನ ಕೆಲಸಕ್ಕಾಗಿ ನೇಮಕಗೊಂಡಿದ್ದ ಅಧಿಕಾರಿಗಳು, ತಮ್ಮಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕೊಟ್ಟರು.


ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.


ದಾವೀದನ ಶೂರಸೈನಿಕರ ಹೆಸರುಗಳು ಹೀಗಿವೆ: ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು. ಮೂವರು ವೀರರಿಗೆ ಯೋಷೆಬಷ್ಷೆಬೆತನು ಮುಖ್ಯಸ್ಥನಾಗಿದ್ದನು. ಅವನನ್ನು ಎಚ್ನೀಯನಾದ ಅದೀನೋ ಎಂದೂ ಕರೆಯುತ್ತಿದ್ದರು. ಯೋಷೆಬಷ್ಷೆಬೆತನು ಏಕಕಾಲದಲ್ಲಿ ಎಂಟುನೂರು ಜನರನ್ನು ಕೊಂದನು.


ದಾವೀದನ ಸೈನ್ಯದಲ್ಲಿ ಪರಾಕ್ರಮಿಗಳಿದ್ದರು. ಈ ಪರಾಕ್ರಮಿಗಳು ದಾವೀದನ ರಾಜ್ಯದಲ್ಲಿ ದಾವೀದನೊಂದಿಗೆ ಮಹಾಬಲಿಷ್ಠರಾದರು. ಅವರು ಮತ್ತು ಎಲ್ಲಾ ಇಸ್ರೇಲರು ದಾವೀದನಿಗೆ ಬೆಂಬಲ ನೀಡಿ ಅವನನ್ನು ರಾಜನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನದ ಪ್ರಕಾರವೇ ನಡೆಯಿತು.


ಸೊಲೊಮೋನನು ಇಸ್ರೇಲರನ್ನೂ ಅಂದರೆ ನ್ಯಾಯಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಸೇನಾಧಿಪತಿಗಳನ್ನೂ ಕುಲಪ್ರಧಾನರನ್ನೂ ಕರೆಯಿಸಿ ಅವರೊಂದಿಗೆ ಗಿಬ್ಯೋನಿನ ಉನ್ನತಸ್ಥಳಕ್ಕೆ ಹೋದನು. ದೇವದರ್ಶನಗುಡಾರವು ಅಲ್ಲಿತ್ತು. ಅರಣ್ಯದಲ್ಲಿ ಇಸ್ರೇಲರು ಪ್ರಯಾಣಿಸುತ್ತಿದ್ದಾಗ ಯೆಹೋವನ ಸೇವಕನಾದ ಮೋಶೆಯು ಗುಡಾರವನ್ನು ಮಾಡಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು