1 ಪೂರ್ವಕಾಲ ವೃತ್ತಾಂತ 27:24 - ಪರಿಶುದ್ದ ಬೈಬಲ್24 ಚೆರೂಯಳ ಮಗನಾದ ಯೋವಾಬನು ಲೆಕ್ಕಿಸುವ ಕಾರ್ಯ ಪ್ರಾರಂಭಿಸಿದನು. ಆದರೆ ಅವನು ಪೂರ್ಣಗೊಳಿಸಲಿಲ್ಲ. ದೇವರು ಇಸ್ರೇಲರ ಮೇಲೆ ಕೋಪಗೊಂಡನು. ಇದರಿಂದಾಗಿ ಇಸ್ರೇಲರ ಜನಸಂಖ್ಯೆಯನ್ನು ದಾವೀದನ ಚರಿತ್ರಾ ಪುಸ್ತಕದಲ್ಲಿ ದಾಖಲೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಚೆರೂಯಳ ಮಗ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಯೇಲರ ಮೇಲೆ ದೇವರ ಕೋಪವುಂಟಾಗಿ, ಅದನ್ನು ಪೂರ್ತಿಗೊಳಿಸಲಿಲ್ಲ. ಈ ಜನಗಣತಿ ದಾವೀದನ ರಾಜ್ಯದ ಇತಿಹಾಸದಲ್ಲಿ ಲಿಖಿತವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ ಇದರ ನಿವಿುತ್ತ ಇಸ್ರಾಯೇಲ್ಯರ ಮೇಲೆ ದೇವರ ಕೋಪವುಂಟಾದದರಿಂದ ಅದನ್ನು ಪೂರ್ತಿಗೊಳಿಸಲಿಲ್ಲ. ಈ ಖಾನೇಷುಮಾರಿಯು ದಾವೀದನ ರಾಜ್ಯ ವೃತ್ತಾಂತಗ್ರಂಥದಲ್ಲಿ ಲಿಖಿತವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಚೆರೂಯಳ ಮಗ ಯೋವಾಬನು ಎಣಿಸಲು ಆರಂಭಿಸಿದನು. ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ಕೋಪಾಗ್ನಿಯು ಬಂದದ್ದರಿಂದ, ಅವನು ಪೂರ್ತಿಗೊಳಿಸಲಿಲ್ಲ. ಆ ಲೆಕ್ಕವು ಅರಸನಾದ ದಾವೀದನ ಇತಿಹಾಸಗಳ ಪುಸ್ತಕದಲ್ಲಿ ಲಿಖಿತವಾಗಲಿಲ್ಲ. ಅಧ್ಯಾಯವನ್ನು ನೋಡಿ |