1 ಪೂರ್ವಕಾಲ ವೃತ್ತಾಂತ 27:25 - ಪರಿಶುದ್ದ ಬೈಬಲ್25 ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ: ಅದೀಯೇಲನ ಮಗನಾದ ಅಜ್ಮಾವೆತ್ ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೀಯನ ಮಗನಾದ ಯೋನಾತಾನ್ ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅರಸ ದಾವೀದನ ಸೊತ್ತಿನ ಮೇಲ್ವಿಚಾರಕರಾಗಿ ನೇಮಕಗೊಂಡವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗ ಅಜ್ಮಾವೆತ್; ಹೊಲದಲ್ಲು, ಪಟ್ಟಣಗಳಲ್ಲು, ಹಳ್ಳಿಗಳಲ್ಲು ಹಾಗೂ ಬರುಜುಗಳ ಮೇಲೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನ್; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇವಿುಸಲ್ಪಟ್ಟವರು ಯಾರಂದರೆ - ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲದಲ್ಲಿಯೂ ಪಟ್ಟಣಗಳಲ್ಲಿಯೂ ಹಳ್ಳಿಗಳಲ್ಲಿಯೂ ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅರಸನ ಬೊಕ್ಕಸಗಳ ಮೇಲೆ ಅದೀಯೇಲನ ಮಗ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಗ್ರಾಮಗಳಲ್ಲಿಯೂ, ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನನು ಇದ್ದನು. ಅಧ್ಯಾಯವನ್ನು ನೋಡಿ |
ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.
ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.