Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:28 - ಪರಿಶುದ್ದ ಬೈಬಲ್‌

28 ಗೆದೆರಿನ ಬಾಳ್ಹಾನಾನ್ ಪಶ್ಚಿಮದ ಬೆಟ್ಟಪ್ರದೇಶದಲ್ಲಿ ಆಲಿವ್ ಮರಗಳ ಮತ್ತು ಸಿಖಮೊರ್ ಮರಗಳ ತೋಪುಗಳಿಗೆ ಅಧಿಕಾರಿಯಾಗಿದ್ದನು. ಯೋವಾಷನು ಆಲಿವ್ ಎಣ್ಣೆಯ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಎಣ್ಣೇ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎಣ್ಣೇಮರದ ತೋಪುಗಳ ಮೇಲೆ ಹಾಗೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆ ಗೆದೆರೂರಿನವನಾದ ಬಾಳ್ಷಾನಾನ್; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಎಣ್ಣೇಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನ್, ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ತಗ್ಗಿನಲ್ಲಿರುವ ಓಲಿವ್ ಮರಗಳ ಮೇಲೆಯೂ, ಅತ್ತಿಮರಗಳ ಮೇಲೆಯೂ ಗೆದೇರ್ಯನಾದ ಬಾಳ್ ಹಾನಾನನು ಇದ್ದನು. ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಜವಾಬ್ದಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:28
9 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿ ಸೊಲೊಮೋನನು ಅಪಾರವಾದ ಬೆಳ್ಳಿಬಂಗಾರಗಳನ್ನು ಶೇಖರಿಸಿಟ್ಟಿದನು. ಭೂಮಿಯ ಮೇಲೆ ಕಲ್ಲುಗಳು ಹೇಗಿರುತ್ತವೋ ಅದೇ ರೀತಿಯಲ್ಲಿ ಅವನಲ್ಲಿ ಬೆಳ್ಳಿಬಂಗಾರಗಳಿದ್ದವು. ದೇವದಾರು ಮರಗಳನ್ನೂ ಸೊಲೊಮೋನನು ಶೇಖರಿಸಿಟ್ಟನು. ಪಶ್ಚಿಮದ ಬೆಟ್ಟಪ್ರದೇಶಗಳಲ್ಲಿ ಜಾಲಿಮರಗಳು ಹೇರಳವಾಗಿರುವಂತೆ ದೇವದಾರುಮರಗಳೂ ಹೇರಳವಾಗಿದ್ದವು.


ರಾಜನು ಇಸ್ರೇಲನ್ನು ಬಹಳ ಶ್ರೀಮಂತವಾಗಿರಿಸಿದನು. ಜೆರುಸಲೇಮಿನಲ್ಲಿ ಬೆಳ್ಳಿಯು ಕಲ್ಲುಗಳಂತೆಯೂ ದೇವದಾರುಮರಗಳು ಬೆಟ್ಟದ ಮೇಲೆ ಬೆಳೆಯುವ ಅನೇಕ ಅಂಜೂರದ ಗಿಡಗಳಂತೆಯೂ ಹೇರಳವಾಗಿದ್ದವು.


ಇಸ್ರೇಲರೂ ಯುದ್ಧಕ್ಕೆ ಸಿದ್ಧರಾದರು. ಇಸ್ರೇಲಿನ ಜನರು ಅರಾಮ್ಯದ ಸೇನೆಯೊಡನೆ ಹೋರಾಡಲು ಹೋದರು. ಅವರು ಅರಾಮ್ಯದ ಪಾಳೆಯಕ್ಕೆ ಎದುರಾಗಿ ತಮ್ಮ ಪಾಳೆಯ ಮಾಡಿಕೊಂಡರು. ಶತ್ರುಗಳಿಗೆ ಹೋಲಿಸಿದರೆ ಇಸ್ರೇಲರು ಆಡುಗಳ ಎರಡು ಚಿಕ್ಕಮಂದೆಯಂತೆ ಕಾಣುತ್ತಿದ್ದರು. ಆದರೆ ಅರಾಮ್ಯದ ಸೈನಿಕರು ಎಲ್ಲಾ ಪ್ರದೇಶವನ್ನು ವ್ಯಾಪಿಸಿದ್ದರು.


ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಆಹಾರಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಆಹಾರಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು.


ಆದ್ದರಿಂದ ಅವನು ಬೇರೊಂದು ಸ್ಥಳಕ್ಕೆ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿ ಕುಳಿತುಕೊಂಡನು. ಯೇಸು ಆ ಸ್ಥಳದ ಮೂಲಕ ಹೋಗುವನೆಂದು ಜಕ್ಕಾಯನಿಗೆ ಗೊತ್ತಿತ್ತು.


ಸೌಲನು ಸತ್ತಮೇಲೆ ಆ ದೇಶವನ್ನು ಬಾಳ್ಹಾನಾನನು ಆಳಿದನು. ಬಾಳ್ಹಾನಾನನು ಅಕ್ಬೋರನ ಮಗನು.


ರಾಮಾದ ಶಿಮ್ಮೀಯು ರಾಜನ ದ್ರಾಕ್ಷಿತೋಟಗಳ ಅಧಿಕಾರಿಯಾಗಿದ್ದನು. ಶಿಪ್ಮೀಯದ ಜಬ್ದೀಯು ರಾಜನ ದ್ರಾಕ್ಷಿತೋಟಗಳಿಂದ ದೊರಕಿದ ದ್ರಾಕ್ಷಾರಸದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.


ಶಾರಯೀಮ್, ಅದೀತಯಿಮ್, ಗೆದೇರಾ ಮತ್ತು ಗೆದೆರೋತಯಿಮ್. ಒಟ್ಟಿನಲ್ಲಿ ಹದಿನಾಲ್ಕು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಗೆದೇರೋತ್, ಬೇತ್‌ದಾಗೋನ್, ನಾಮಾ ಮತ್ತು ಮಕ್ಕೆದಾ. ಒಟ್ಟಿನಲ್ಲಿ ಹದಿನಾರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು