1 ಪೂರ್ವಕಾಲ ವೃತ್ತಾಂತ 28:10 - ಪರಿಶುದ್ದ ಬೈಬಲ್10 ಸೊಲೊಮೋನನೇ, ಆತನ ಪವಿತ್ರ ದೇವಾಲಯವನ್ನು ಕಟ್ಟಲು ದೇವರು ನಿನ್ನನ್ನು ಆರಿಸಿಕೊಂಡಿರುತ್ತಾನೆಂಬುದನ್ನು ನೀನು ತಿಳಿಯಬೇಕು. ಆದ್ದರಿಂದ ನೀನು ಬಲಗೊಂಡು ಕಾರ್ಯವನ್ನು ಸಂಪೂರ್ಣಗೊಳಿಸು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ನೋಡಿಕೋ; ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನಷ್ಟೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು. ಅಧ್ಯಾಯವನ್ನು ನೋಡಿ |