1 ಪೂರ್ವಕಾಲ ವೃತ್ತಾಂತ 28:14 - ಪರಿಶುದ್ದ ಬೈಬಲ್14 ದೇವಾಲಯದಲ್ಲಿ ಎಲ್ಲಾ ಸಲಕರಣೆಗಳಿಗೆ ಎಷ್ಟು ಬೆಳ್ಳಿಬಂಗಾರಗಳು ಬೇಕಾಗುತ್ತವೆ ಎಂಬುದನ್ನು ದಾವೀದನು ಸೊಲೊಮೋನನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇವುಗಳ ವಿಷಯವಾಗಿ ಪವಿತ್ರಾತ್ಮನು ತನ್ನ ಮನಸ್ಸಿನಲ್ಲಿ ಕೊಟ್ಟಿದ್ದ ಯೋಜನೆಗಳನ್ನು ವಿವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆರಾಧನೆಯ ಎಲ್ಲಾ ಸಾಮಗ್ರಿಗಳು, ಇವುಗಳ ಬಗ್ಗೆ ತಾವು ನಿರ್ಣಯಿಸಿಕೊಂಡದ್ದೆಲ್ಲವನ್ನೂ ವಿವರವಾಗಿ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆರಾಧನೆಯ ಎಲ್ಲಾ ಸಾಮಗ್ರಿಗಳು ಇವುಗಳ ವಿಷಯವಾಗಿಯೂ ತಾನು ನಿರ್ಣಯಿಸಿಕೊಂಡದ್ದೆಲ್ಲವನ್ನೂ ವಿವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಲಕರಣೆಗಳಿಗೋಸ್ಕರ ಬಂಗಾರವನ್ನೂ, ಸಕಲ ವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿಕೊಟ್ಟನು. ಅಧ್ಯಾಯವನ್ನು ನೋಡಿ |
ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ.