Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:16 - ಪರಿಶುದ್ದ ಬೈಬಲ್‌

16 ಪವಿತ್ರವಾದ ರೊಟ್ಟಿಯನ್ನು ಇಡುವ ಮೇಜನ್ನು ತಯಾರಿಸಲು ಎಷ್ಟು ಬಂಗಾರ ಬೇಕಾಗುತ್ತದೆ ಮತ್ತು ಬೆಳ್ಳಿಯಿಂದ ಮಾಡುವ ಮೇಜಿಗೆ ಎಷ್ಟು ಬೆಳ್ಳಿ ಬೇಕಾಗುತ್ತದೆ ಎಂಬುದನ್ನು ಸಹ ದಾವೀದನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೀಸಲು ರೊಟ್ಟಿಗಳನ್ನಿಡುವ ಬಟ್ಟಲುಗಳು ಹಾಗೂ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೀಸಲು ರೊಟ್ಟಿಗಳನ್ನಿಡುವ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೀಸಲ ರೊಟ್ಟಿಗಳನ್ನಿಡುವ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು. ಬೆಳ್ಳಿಯ ಮೇಜುಗಳಿಗೋಸ್ಕರ ಬೆಳ್ಳಿಯನ್ನು ತೂಗಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:16
7 ತಿಳಿವುಗಳ ಹೋಲಿಕೆ  

ಸೊಲೊಮೋನನು ದೇವಾಲಯದೊಳಗೆ ಉಪಯೋಗಿಸುವ ಉಪಕರಣಗಳನ್ನು ಮಾಡಿಸಿದನು. ಅವನು ಬಂಗಾರದ ಯಜ್ಞವೇದಿಕೆಯನ್ನು ಮಾಡಿಸಿದನು; ನೈವೇದ್ಯದ ರೊಟ್ಟಿಗಳನ್ನು ಇಡಲು ಮೇಜುಗಳನ್ನು ಮಾಡಿಸಿದನು;


ಅವನು ಹತ್ತು ಮೇಜುಗಳನ್ನು ಮಾಡಿಸಿ ಅವುಗಳಲ್ಲಿ ಐದನ್ನು ದೇವಾಲಯದ ಬಲಗಡೆಯಲ್ಲಿಯೂ ಉಳಿದ ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಅನಂತರ ಸೊಲೊಮೋನನು ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.


ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.


ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಬಂಗಾರದ ದೀಪಗಳಿಗೆ ಮತ್ತು ದೀಪಸ್ತಂಭಗಳಿಗೆ, ಬೆಳ್ಳಿಯ ದೀಪಗಳಿಗೆ ಮತ್ತು ದೀಪಸ್ತಂಭಗಳಿಗೆ ನಕ್ಷೆಗಳಿದ್ದವು. ಪ್ರತಿಯೊಂದು ದೀಪ ಮತ್ತು ದೀಪಸ್ತಂಭಗಳಿಗೆ ಬೇಕಾಗುವ ಬೆಳ್ಳಿಬಂಗಾರಗಳನ್ನು ಸಹ ದಾವೀದನು ಸೊಲೊಮೋನನಿಗೆ ತಿಳಿಸಿದನು. ಅವಶ್ಯಕತೆಗೆ ತಕ್ಕಂತೆ ಈ ದೀಪಸ್ತಂಭಗಳನ್ನು ಉಪಯೋಗಿಸಲಾಗುತ್ತಿತ್ತು.


ಮುಳ್ಳುಚಮಚ, ಚಿಮಿಕಿಸುವ ಬೋಗುಣಿ ಮತ್ತು ಹೂಜೆಗಳಿಗೆ ಬೇಕಾಗುವ ಚೊಕ್ಕ ಬಂಗಾರವನ್ನು ದಾವೀದನು ತಿಳಿಸಿದನು; ಅಲ್ಲದೆ ಬೆಳ್ಳಿಬಂಗಾರಗಳಿಂದ ಮಾಡಬೇಕಾದ ಬೋಗುಣಿಗಳಿಗೆ ಎಷ್ಟು ಬೆಳ್ಳಿಬಂಗಾರಗಳು ಬೇಕಾಗುತ್ತದೆ ಎಂಬುದನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು