Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:17 - ಪರಿಶುದ್ದ ಬೈಬಲ್‌

17 ಮುಳ್ಳುಚಮಚ, ಚಿಮಿಕಿಸುವ ಬೋಗುಣಿ ಮತ್ತು ಹೂಜೆಗಳಿಗೆ ಬೇಕಾಗುವ ಚೊಕ್ಕ ಬಂಗಾರವನ್ನು ದಾವೀದನು ತಿಳಿಸಿದನು; ಅಲ್ಲದೆ ಬೆಳ್ಳಿಬಂಗಾರಗಳಿಂದ ಮಾಡಬೇಕಾದ ಬೋಗುಣಿಗಳಿಗೆ ಎಷ್ಟು ಬೆಳ್ಳಿಬಂಗಾರಗಳು ಬೇಕಾಗುತ್ತದೆ ಎಂಬುದನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಚೊಕ್ಕ ಬಂಗಾರದ ಮುಳ್ಳು ಬೋಗುಣಿ, ಹೂಜಿಗಳ ಮತ್ತು ಬೆಳ್ಳಿ ಬಂಗಾರದ ಆಯಾ ಪಾತ್ರೆಗಳ ತೂಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಚೊಕ್ಕ ಬಂಗಾರದ ಮುಳ್ಳು, ಬೋಗುಣಿ, ಹೂಜಿಗಳ ಮತ್ತು ಬೆಳ್ಳಿಬಂಗಾರದ ಆಯಾ ಪಾತ್ರೆಗಳ ತೂಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಚೊಕ್ಕ ಬಂಗಾರದ ಮುಳ್ಳು ಬೋಗುಣಿ ಹೂಜೆಗಳ ಮತ್ತು ಬೆಳ್ಳಿಬಂಗಾರದ ಆಯಾ ಪಾತ್ರೆಗಳ ತೂಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದೇ ಪ್ರಕಾರ ಮುಳ್ಳುಗಳೂ, ಪಾತ್ರೆಗಳೂ, ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿಗೋಸ್ಕರ, ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ; ಬೆಳ್ಳಿಯ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:17
8 ತಿಳಿವುಗಳ ಹೋಲಿಕೆ  

ಸೊಲೊಮೋನನ ಬಟ್ಟಲುಗಳು ಮತ್ತು ಲೋಟಗಳು ಬಂಗಾರದಿಂದ ತಯಾರಿಸಲಾಗಿದ್ದವು. “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿದ್ದ ಎಲ್ಲಾ ಆಯುಧಗಳನ್ನು ಅಪ್ಪಟ ಚಿನ್ನದಿಂದ ಮಾಡಿದ್ದರು. ಅರಮನೆಯ ಯಾವ ವಸ್ತುವನ್ನೂ ಬೆಳ್ಳಿಯಿಂದ ಮಾಡಿರಲಿಲ್ಲ. ಜನರು ಬೆಳ್ಳಿಯನ್ನು ಅಮೂಲ್ಯವೆಂದು ಯೋಚಿಸದಷ್ಟು ಬಂಗಾರವು ಸೊಲೊಮೋನನ ಕಾಲದಲ್ಲಿತ್ತು!


“ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು.


ಪವಿತ್ರವಾದ ರೊಟ್ಟಿಯನ್ನು ಇಡುವ ಮೇಜನ್ನು ತಯಾರಿಸಲು ಎಷ್ಟು ಬಂಗಾರ ಬೇಕಾಗುತ್ತದೆ ಮತ್ತು ಬೆಳ್ಳಿಯಿಂದ ಮಾಡುವ ಮೇಜಿಗೆ ಎಷ್ಟು ಬೆಳ್ಳಿ ಬೇಕಾಗುತ್ತದೆ ಎಂಬುದನ್ನು ಸಹ ದಾವೀದನು ತಿಳಿಸಿದನು.


ಧೂಪವೇದಿಗೆ ಎಷ್ಟು ಅಪ್ಪಟ ಬಂಗಾರ ಬೇಕೆಂಬುದನ್ನು ದಾವೀದನು ತಿಳಿಸಿದನು. ಇದಲ್ಲದೆ ದೇವರ ಕೃಪಾಸನವನ್ನು ಮತ್ತು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ರೆಕ್ಕೆಗಳನ್ನು ಚಾಚಿಕೊಂಡಿರುವ ಕೆರೂಬಿದೂತರನ್ನು ತಯಾರಿಸಲು ನಕ್ಷೆಗಳನ್ನು ದಾವೀದನು ಸೊಲೊಮೋನನಿಗೆ ಕೊಟ್ಟನು. ಕೆರೂಬಿದೂತರನ್ನು ಚಿನ್ನದಿಂದ ಮಾಡಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು