1 ಪೂರ್ವಕಾಲ ವೃತ್ತಾಂತ 28:18 - ಪರಿಶುದ್ದ ಬೈಬಲ್18 ಧೂಪವೇದಿಗೆ ಎಷ್ಟು ಅಪ್ಪಟ ಬಂಗಾರ ಬೇಕೆಂಬುದನ್ನು ದಾವೀದನು ತಿಳಿಸಿದನು. ಇದಲ್ಲದೆ ದೇವರ ಕೃಪಾಸನವನ್ನು ಮತ್ತು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ರೆಕ್ಕೆಗಳನ್ನು ಚಾಚಿಕೊಂಡಿರುವ ಕೆರೂಬಿದೂತರನ್ನು ತಯಾರಿಸಲು ನಕ್ಷೆಗಳನ್ನು ದಾವೀದನು ಸೊಲೊಮೋನನಿಗೆ ಕೊಟ್ಟನು. ಕೆರೂಬಿದೂತರನ್ನು ಚಿನ್ನದಿಂದ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕ ಬಂಗಾರದ ತೂಕ ಎಷ್ಟೆಷ್ಟಾಗಿರಬೇಕೆಂಬುದನ್ನು ವಿವರಿಸಿ, ರೆಕ್ಕೆಗಳನ್ನು ಹರಡಿಕೊಂಡು ಯೆಹೋವನ ಒಡಂಬಡಿಕೆ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕಬಂಗಾರದ ತೂಕ ಎಷ್ಟೆಷ್ಟು ಇರಬೇಕೆಂಬುದನ್ನು ವಿವರಿಸಿದನು. ಹರಡಿದ ರೆಕ್ಕೆಗಳಿಂದ ಸರ್ವೇಶ್ವರನ ನಿಬಂಧನ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕ ಬಂಗಾರದ ತೂಕ ಎಷ್ಟೆಷ್ಟಾಗಿರಬೇಕೆಂಬದನ್ನು ವಿವರಿಸಿ ಹರಡಿದ ರೆಕ್ಕೆಗಳಿಂದ ಯೆಹೋವನ ನಿಬಂಧನಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ, ರೆಕ್ಕೆಗಳನ್ನೂ ಚಾಚಿಕೊಂಡು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು. ಅಧ್ಯಾಯವನ್ನು ನೋಡಿ |
ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.