Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:19 - ಪರಿಶುದ್ದ ಬೈಬಲ್‌

19 ಆಮೇಲೆ ದಾವೀದನು, “ನಕ್ಷೆಗಳನ್ನೆಲ್ಲ ಮಾಡಲು ಯೆಹೋವನೇ ನನ್ನನ್ನು ನಡಿಸಿ ಮಾರ್ಗದರ್ಶನ ಕೊಟ್ಟನು. ಈ ನಕ್ಷೆಗಳಲ್ಲಿರುವ ಸಕಲ ವಿಷಯಗಳನ್ನು ನಾನು ಅರಿತುಕೊಳ್ಳುವಂತೆ ಸಹಾಯ ಮಾಡಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿಷಯವಾದ ಜ್ಞಾನವು ತನಗೆ ಯೆಹೋವನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಯೆಹೋವ ದೇವರು ತಮ್ಮ ಕೈಯನ್ನು ನನ್ನ ಮೇಲೆ ಇರಿಸಿ, ಈ ಯೋಜನೆಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:19
8 ತಿಳಿವುಗಳ ಹೋಲಿಕೆ  

ನಾನು ನಿನಗೆ ಬೆಟ್ಟದ ಮೇಲೆ ತೋರಿಸಿದ ಮಾದರಿಯಂತೆಯೇ ಪ್ರತಿಯೊಂದನ್ನು ಮಾಡಬೇಕು” ಎಂದು ಹೇಳಿದನು.


ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನಗೆ, “ಎದ್ದೇಳು, ಬಯಲು ಸೀಮೆಗೆ ಹೋಗು. ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.


ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.


ನಾನು ನಿನಗೆ ಬೆಟ್ಟದಲ್ಲಿ ತೋರಿಸಿದ ಪ್ರಕಾರವೇ ಪವಿತ್ರಗುಡಾರವನ್ನು ಮಾಡಿಸಬೇಕು.


ದರ್ಶನವೊಂದರಲ್ಲಿ ಯೆಹೋವನು ನನ್ನನ್ನು ಇಸ್ರೇಲ್ ದೇಶಕ್ಕೆ ಒಯ್ದನು. ಆತನು ನನ್ನನ್ನು ಬಹಳ ಉನ್ನತ ಪರ್ವತದ ಬಳಿ ಇರಿಸಿದನು. ನನ್ನೆದುರಿಗಿದ್ದ ಆ ಪರ್ವತ ಒಂದು ನಗರದಂತೆ ಕಂಡಿತು.


ಈ ದೇವಾಲಯದ ನಿರ್ಮಾಣವು ವರ್ಷದ ಎಂಟನೇ ತಿಂಗಳಾದ ಬುಲ್ (ಕಾರ್ತಿಕ) ತಿಂಗಳಲ್ಲಿ ಮುಗಿಯಿತು. ಅದು ಸೊಲೊಮೋನನ ಆಳ್ವಿಕೆಯ ಹನ್ನೊಂದನೆಯ ವರ್ಷವಾಗಿತ್ತು. ದೇವಾಲಯವನ್ನು ಕಟ್ಟಲು ಏಳು ವರ್ಷ ಹಿಡಿಯಿತು. ದೇವಾಲಯವನ್ನು ಅದರ ನಿಯಮಾನುಸಾರವಾಗಿ ಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು