Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:2 - ಪರಿಶುದ್ದ ಬೈಬಲ್‌

2 ಎಲ್ಲರೂ ಸೇರಿಬಂದಾಗ ದಾವೀದನು ನಿಂತು ಹೇಳಿದ್ದೇನೆಂದರೆ, “ನನ್ನ ಜನರೇ, ನನ್ನ ಸಹೋದರರೇ, ನನ್ನ ಮಾತುಗಳನ್ನು ಕೇಳಿರಿ. ನಮ್ಮ ದೇವರ ಒಡಂಬಡಿಕೆಯ ಪೆಟ್ಟಿಗೆಗೋಸ್ಕರ ಒಂದು ಯೋಗ್ಯಸ್ಥಳವನ್ನು ನಿರ್ಮಿಸಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಆ ಸ್ಥಳವು ದೇವರ ಪಾದಪೀಠವಾಗಬೇಕು. ಅದಕ್ಕಾಗಿ ನಾನು ದೇವರಿಗೆ ಆಲಯವನ್ನು ಕಟ್ಟಿಸಲು ಯೋಜನೆಯನ್ನು ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಕೂಡಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನಂದರೆ - ನನ್ನ ಸಹೋದರರೇ, ಪ್ರಜೆಗಳೇ, ಕೇಳಿರಿ. ಯೆಹೋವನ ನಿಬಂಧನಮಂಜೂಷಕ್ಕೋಸ್ಕರವೂ ನಮ್ಮ ದೇವರ ಪಾದಪೀಠಕ್ಕೋಸ್ಕರವೂ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಅರಸನಾದ ದಾವೀದನು ಎದ್ದು ನಿಂತು, “ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ. ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ನಿಮಿತ್ತವಾಗಿಯೂ, ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಗೆ ಆಲಯವನ್ನು ನಾನು ಕಟ್ಟಿಸಲು ಮನಸ್ಸು ಮಾಡಿ, ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:2
30 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, ಆತನ ಪವಿತ್ರ ಪಾದಪೀಠಕ್ಕೆ ಅಡ್ಡಬೀಳಿರಿ.


ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.


‘ಪ್ರಭುವು ಹೀಗೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!


“ಇದು ನನ್ನ ಶಾಶ್ವತ ನಿವಾಸಸ್ಥಾನ. ನಾನು ಇಲ್ಲೇ ಆಸನಾರೂಢನಾಗಿರುವೆನು. ಇದೇ ನನಗೆ ಇಷ್ಟವಾದ ಸ್ಥಳ.


ನಿನ್ನ ನಾಮದ ಕುರಿತು ನನ್ನ ಸಹೋದರರಿಗೆ ಹೇಳುವೆನು; ಮಹಾಸಭೆಯಲ್ಲಿ ನಿನ್ನನ್ನು ಸುತ್ತಿಸುವೆನು.


“ಸೊಲೊಮೋನನೇ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಮೂರು ಸಾವಿರದ ಏಳುನೂರೈವತ್ತು ಟನ್ ಬಂಗಾರ, ಮೂವತ್ತೇಳು ಸಾವಿರದ ಐನೂರು ಟನ್ ಬೆಳ್ಳಿ ಮತ್ತು ತೂಕ ಮಾಡಲಾಗದಷ್ಟು ತಾಮ್ರ ಮತ್ತು ಕಬ್ಬಿಣವನ್ನು ಕೂಡಿಸಿಟ್ಟಿದ್ದೇನೆ. ಅಲ್ಲದೆ ಮರಗಳನ್ನು ಮತ್ತು ಕಲ್ಲುಗಳನ್ನು ಕೊಟ್ಟಿರುತ್ತೇನೆ. ಸೊಲೊಮೋನನೇ, ನೀನು ಇವುಗಳಿಗೆ ಇನ್ನೂ ಕೂಡಿಸು.


ದೇವದರ್ಶನಗುಡಾರದ ಮಹಾಪವಿತ್ರಸ್ಥಳದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಟ್ಟ ಬಳಿಕ ಅರಸನಾದ ದಾವೀದನು ಗಾಯಕರನ್ನು ಆರಿಸಿದನು.


ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹುಕಾಲ ಆಳುವರು.


ಅಂಥ ಸಮಯದಲ್ಲಿ ಯೆಹೋವನು ಆರಿಸಿಕೊಂಡವನನ್ನೇ ನೀವು ರಾಜನನ್ನಾಗಿ ಆರಿಸಿಕೊಳ್ಳಬೇಕು; ಅವನು ನಿಮ್ಮ ಸ್ವಂತ ಜನರಲ್ಲಿ ಒಬ್ಬನಾಗಿರಬೇಕು; ಪರದೇಶಸ್ಥನನ್ನು ನೀವು ನಿಮ್ಮ ರಾಜನನ್ನಾಗಿ ಆರಿಸಬಾರದು.


ಯೋಸೇಫನು ಬಂದಾಗ ಯಾರೋ ಒಬ್ಬನು ಇಸ್ರೇಲನಿಗೆ, “ನಿನ್ನ ಮಗನಾದ ಯೋಸೇಫನು ನಿನ್ನನ್ನು ನೋಡಲು ಬಂದಿದ್ದಾನೆ” ಎಂದು ಹೇಳಿದನು. ಆಗ ಅವನು ಬಹಳ ಬಲಹೀನನಾಗಿದ್ದರೂ ಕಷ್ಟಪಟ್ಟು ಹಾಸಿಗೆಯ ಮೇಲೆ ಕುಳಿತುಕೊಂಡನು.


“ನನ್ನ ತಂದೆಯಾದ ದಾವೀದನು ತನ್ನ ಸುತ್ತಮುತ್ತಲಿನವರೊಂದಿಗೆ ಅನೇಕ ಯುದ್ಧಗಳನ್ನು ಮಾಡಬೇಕಾಯಿತು, ಆದ್ದರಿಂದ ಅವನು ತನ್ನ ದೇವರಾದ ಯೆಹೋವನ ಗೌರವಕ್ಕಾಗಿ ಒಂದು ದೇವಾಲಯವನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ. ತನ್ನ ಎಲ್ಲಾ ಶತ್ರುಗಳನ್ನು ಸೋಲಿಸಲು ಯೆಹೋವನು ಅವಕಾಶ ಕೊಡುವ ತನಕ ರಾಜನಾದ ದಾವೀದನು ಕಾಯುತ್ತಿದ್ದನು.


ದೇವರು ಅವನಿಗೆ, “ನನ್ನ ಸೇವಕನಾದ ದಾವೀದನಿಗೆ ಹೀಗೆ ಹೇಳು: ‘ನನಗೋಸ್ಕರ ಆಲಯವನ್ನು ಕಟ್ಟುವವನು ನೀನಲ್ಲ.


“ಇಸ್ರೇಲರ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.


ಲೆಬನೋನಿನ ಎಲ್ಲಾ ಅಮೂಲ್ಯವಸ್ತುಗಳನ್ನು ನಿನಗೆ ಕೊಡಲಾಗುವುದು. ಜನರು ದೇವದಾರು ಮರಗಳನ್ನೂ ಇತರ ವಿಶೇಷ ಮರಗಳನ್ನೂ ನಿನಗೆ ತಂದುಕೊಡುವರು. ಈ ಮರಗಳಿಂದ ತೊಲೆಗಳನ್ನು ಮಾಡಿ ನನ್ನ ಪವಿತ್ರ ಆಲಯವನ್ನು ಸೌಂದರ್ಯಗೊಳಿಸುವರು. ಅದು ನನ್ನ ಸಿಂಹಾಸನದ ಮುಂದಿರುವ ಪಾದಪೀಠದಂತಿರುವದು. ಅದಕ್ಕೆ ನಾನು ಹೆಚ್ಚಾದ ಗೌರವ ಕೊಡುವೆನು.


ದಾವೀದನು ತನ್ನ ಮಗನಾದ ಸೊಲೊಮೋನನನ್ನು ಕರೆದು ಇಸ್ರೇಲಿನ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟುವಂತೆ ಹೇಳಿದನು.


ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿದ್ದೆನು.


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.


ದಾವೀದನು ಯೆಹೋವನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದನು; ಇಸ್ರೇಲರ ಶೂರನಾದ ದೇವರಿಗೆ ಆತನು ವಿಶೇಷವಾದ ಹರಕೆಯೊಂದನ್ನು ಮಾಡಿಕೊಂಡನು.


ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.


ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು