1 ಪೂರ್ವಕಾಲ ವೃತ್ತಾಂತ 28:20 - ಪರಿಶುದ್ದ ಬೈಬಲ್20 ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಈ ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿಗಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ. ಅಧ್ಯಾಯವನ್ನು ನೋಡಿ |