4 “ಇಸ್ರೇಲರ ದೇವರಾದ ಯೆಹೋವನು ಇಸ್ರೇಲರ ಹನ್ನೆರಡು ಕುಲಗಳನ್ನು ಮುನ್ನಡೆಸಲು ಯೆಹೂದ ಕುಲವನ್ನು ಆರಿಸಿಕೊಂಡಿದ್ದಾನೆ. ಆ ಕುಲದಿಂದ ದೇವರು ನನ್ನ ತಂದೆಯ ಕುಟುಂಬವನ್ನು ಆರಿಸಿದ್ದಾನೆ; ಆ ಕುಟುಂಬದಿಂದ ದೇವರು ಇಸ್ರೇಲರ ಅರಸನನ್ನಾಗಿ ನನ್ನನ್ನು ಆರಿಸಿಕೊಂಡಿದ್ದಾನೆ.
4 ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.
4 “ಇಸ್ರಯೇಲ್ ದೇವರಾದ ಸರ್ವೇಶ್ವರ ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಯೇಲರ ಅರಸನಾಗಿರುವುದಕ್ಕೆ ಆರಿಸಿಕೊಂಡರು; ಯೆಹೂದಕುಲ ರಾಜಕುಲವಾಗಬೇಕೆಂದು ನೇಮಿಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡರು. ನನ್ನ ತಂದೆಯ ಎಲ್ಲ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ, ಇಸ್ರಯೇಲರೆಲ್ಲರ ಅರಸನನ್ನಾಗಿ ಮಾಡಿದರು.
4 ಇಸ್ರಾಯೇಲ್ ದೇವರಾದ ಯೆಹೋವನು ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಆರಿಸಿಕೊಂಡನು. ಆತನು ಯೆಹೂದಕುಲವು ರಾಜಕುಲವಾಗಬೇಕೆಂದು ನೇವಿುಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರೆಲ್ಲರ ಅರಸನನ್ನಾಗಿ ಮಾಡಿದನು.
4 “ಆದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರೊಳಗಿಂದ ನನ್ನನ್ನು ಆರಿಸಿಕೊಂಡರು. ಏಕೆಂದರೆ ಅವನು ನಾಯಕನಾಗಿರಲು ಯೆಹೂದ ಗೋತ್ರವನ್ನೂ, ಯೆಹೂದ ಗೋತ್ರದಿಂದ ನನ್ನ ಕುಟುಂಬವನ್ನೂ ಆದುಕೊಂಡು, ನನ್ನ ತಂದೆಯ ಪುತ್ರರಲ್ಲಿ ನನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಲು ಚಿತ್ತವುಳ್ಳವರಾಗಿದ್ದರು.
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.
ನನ್ನ ಸಂತತಿಯವರನ್ನು ಆಶೀರ್ವದಿಸಿ ನಿನ್ನ ಕರುಣೆಯನ್ನು ತೋರಿಸಿದೆ. ನನ್ನ ಸಂತತಿಯವರು ಸದಾಕಾಲ ನಿನ್ನ ಸೇವೆಮಾಡುತ್ತಾರೆಂದು ನೀನು ವಾಗ್ದಾನ ಮಾಡಿರುವೆ. ಯೆಹೋವನೇ, ನೀನಾಗಿಯೇ ನನ್ನ ಸಂತತಿಯವರನ್ನು ಆಶೀರ್ವದಿಸಿದ್ದರಿಂದ ನನ್ನ ಸಂತತಿಯವರು ಸದಾಕಾಲಕ್ಕೂ ಆಶೀರ್ವಾದ ಹೊಂದಿಕೊಳ್ಳುವರು!” ಎಂದು ಪ್ರಾರ್ಥಿಸಿದನು.
ಜೀಫಿನ ಜನರು ಸೌಲನನ್ನು ನೋಡುವುದಕ್ಕಾಗಿ ಗಿಬೆಯಕ್ಕೆ ಹೋದರು. ಅವರು ಸೌಲನಿಗೆ, “ದಾವೀದನು ಹಕೀಲಾ ಬೆಟ್ಟದ ಮೇಲೆ ಅಡಗಿಕೊಂಡಿದ್ದಾನೆ. ಈ ಬೆಟ್ಟವು ಜೆಸಿಮೋನ್ ಅರಣ್ಯಕ್ಕೆ ಎದುರಿನಲ್ಲಿದೆ” ಎಂದು ಹೇಳಿದರು.
ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು.