Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:8 - ಪರಿಶುದ್ದ ಬೈಬಲ್‌

8 “ನಾನು ದೇವರ ಸನ್ನಿಧಾನದಲ್ಲಿಯೂ ಎಲ್ಲಾ ಇಸ್ರೇಲರ ಮುಂದೆಯೂ ನಿಮಗಿದನ್ನು ಹೇಳುತ್ತಿದ್ದೇನೆ. ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನೀವು ಉತ್ತಮವಾದ ಈ ದೇಶವನ್ನು ಅನುಭವಿಸುವಿರಿ; ನಿಮ್ಮ ಸಂತತಿಯವರೂ ಇದರ ಸುಖವನ್ನು ಅನುಭವಿಸುವಂತೆ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದುದರಿಂದ ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಸಭೆಯಾದ ಸಮಸ್ತ ಇಸ್ರಾಯೇಲರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವತ್ತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನಿಮ್ಮ ದೇವರಾದ ಸರ್ವೇಶ್ವರನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಗೊಳ್ಳಬೇಕೆಂದು ಸರ್ವೇಶ್ವರನ ಸಮಾಜವಾದ ಸಮಸ್ತ ಇಸ್ರಯೇಲರ ಮುಂದೆ, ನಮ್ಮ ದೇವರಿಗೆ ಕೇಳಿಸುವಂತೆ, ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ನಾಡು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸೊತ್ತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಮಂಡಲಿಯಾದ ಸಮಸ್ತ ಇಸ್ರಾಯೇಲ್ಯರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೇ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವಾಸ್ತ್ಯವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದ್ದರಿಂದ ನೀವು ಈ ಉತ್ತಮ ದೇಶವನ್ನು ಸ್ವಾಧೀನಮಾಡಿಕೊಂಡು, ಅದನ್ನು ನಿರಂತರದಲ್ಲಿ ನಿಮ್ಮ ತರುವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ, ಯೆಹೋವ ದೇವರ ಸಭೆಯಾದ ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿಯೂ, ನಮ್ಮ ದೇವರು ಕೇಳಿಸುವಂತೆ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಗೊಳ್ಳಿರಿ ಎಂದು ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:8
28 ತಿಳಿವುಗಳ ಹೋಲಿಕೆ  

“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


ಯೆಹೋವನ ಸುರುಳಿಯನ್ನು ನೋಡಿರಿ. ಅಲ್ಲಿ ಬರೆದಿರುವದನ್ನು ಓದಿರಿ. ಅದರಲ್ಲಿ ಯಾವದೂ ಕಳೆದುಹೋಗಿಲ್ಲ. ಆ ಪ್ರಾಣಿಗಳು ಒಟ್ಟಾಗಿ ವಾಸಿಸುವವೆಂದು ಆ ಸುರುಳಿಯಲ್ಲಿ ಬರೆದದೆ. ಅವುಗಳನ್ನು ಒಟ್ಟಾಗಿ ಸೇರಿಸುತ್ತೇನೆಂದು ದೇವರು ಹೇಳಿದ್ದಾನೆ. ಆದ್ದರಿಂದ ಯೆಹೋವನ ಆತ್ಮವು ಅವುಗಳನ್ನು ಒಟ್ಟಾಗಿ ಸೇರಿಸುವದು.


ಒಳ್ಳೆಯವನಲ್ಲಿ ತನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಕೊಡಲು ಐಶ್ವರ್ಯವಿರುವುದು. ಕಟ್ಟಕಡೆಯಲ್ಲಿ, ಕೆಡುಕರು ಹೊಂದಿರುವದೆಲ್ಲಾ ಒಳ್ಳೆಯವರ ಪಾಲಾಗುವುದು.


ಆದ್ದರಿಂದ ಇಸ್ರೇಲ್ ಜನರೇ, ನಿಮ್ಮ ಮಕ್ಕಳು ಅವರ ಮಕ್ಕಳನ್ನು ಮದುವೆಯಾಗಲು ಬಿಡಬೇಡಿ. ಅವರ ಸಹವಾಸ ಮಾಡಬೇಡಿರಿ. ಅವರ ವಸ್ತುಗಳನ್ನು ಆಶಿಸಬೇಡಿರಿ. ನನ್ನ ಕಟ್ಟಳೆಗಳನ್ನು ಪಾಲಿಸಿರಿ; ಆಗ ನೀವು ಬಲಶಾಲಿಗಳಾಗಿ ಈ ದೇಶವನ್ನು ಅನುಭವಿಸುವಿರಿ. ಈ ದೇಶವನ್ನು ನೀನು ಇಟ್ಟುಕೊಂಡವರಾಗಿ ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಿರಿ.’


“ಆದ್ದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ.


ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.


ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.


ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.


ನಿನ್ನ ಉಪದೇಶಗಳನ್ನು ಎಂದೆಂದಿಗೂ ಅನುಸರಿಸುವೆನು.


ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ.


ಇಂದು ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಇಲ್ಲಿ ನಿಂತಿರುವ ನಮ್ಮೆಲ್ಲರೊಂದಿಗೂ ಇಂದು ನಮ್ಮೊಂದಿಗಿಲ್ಲದ ನಮ್ಮ ಸಂತತಿಯವರಿಗೂ ಆತನು ಈ ಒಡಂಬಡಿಕೆಯನ್ನು ಮಾಡುತ್ತಿದ್ದಾನೆ.


“ಈ ದಿನ ನೀವೆಲ್ಲರೂ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ನಾಯಕರು, ಹಿರಿಯರು, ನಿಮ್ಮ ಜನರೆಲ್ಲಾ ಇಲ್ಲಿ ಇರುವಿರಿ.


ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.


ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು


ನಿನ್ನ ಕಟ್ಟಳೆಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ನೀನು ಮಾಡಿದ ಅದ್ಭುತಕಾರ್ಯಗಳನ್ನು ನನಗೆ ತಿಳಿಯಪಡಿಸು.


ಸೊಲೊಮೋನನು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯನಾಗಿದ್ದಾನೆ. ಅವನು ಹೀಗೆಯೇ ಮುಂದುವರಿದರೆ ನಾನು ಅವನ ರಾಜ್ಯವನ್ನು ಶಾಶ್ವತವಾಗಿ ಬಲಗೊಳಿಸುವೆನು’” ಎಂದು ಹೇಳಿದನು.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.


ಮೋಶೆ ಮತ್ತು ಸಮೂಹದ ಹಿರಿಯರು ಜನರೊಂದಿಗೆ ಮಾತನಾಡಿದರು. ಮೋಶೆಯು ಹೇಳಿದ್ದೇನೆಂದರೆ: “ನಾನು ಆಜ್ಞಾಪಿಸಿದ ಎಲ್ಲಾ ವಿಧಿಗಳನ್ನು ಅನುಸರಿಸಿರಿ.


ನೀವು ಯೆಹೋವನನ್ನು ಬಿಟ್ಟು ಅನ್ಯದೇವರುಗಳ ಸೇವೆಮಾಡಿದರೆ ಆತನು ನಿಮಗೆ ಕೇಡನ್ನು ಬರಮಾಡುವನು. ಯೆಹೋವನು ನಿಮ್ಮನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯವನಾಗಿದ್ದಾನೆ. ಆದರೆ ನೀವು ಆತನಿಗೆ ವಿಮುಖರಾದರೆ ಆತನು ನಿಮ್ಮನ್ನು ನಾಶಮಾಡುತ್ತಾನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು