1 ಪೂರ್ವಕಾಲ ವೃತ್ತಾಂತ 29:11 - ಪರಿಶುದ್ದ ಬೈಬಲ್11 ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವಾ, ಮಹಿಮಪ್ರತಾಪ ವೈಭವ ಪರಾಕ್ರಮಪ್ರಭಾವಗಳು ನಿನ್ನವು; ಭೂಮ್ಯಾಕಾಶಗಳಲ್ಲಿರುವದೆಲ್ಲಾ ನಿನ್ನದೇ. ಯೆಹೋವನೇ, ರಾಜ್ಯವು ನಿನ್ನದು; ನೀನು ಮಹೋನ್ನತನಾಗಿ ಸರ್ವವನ್ನೂ ಆಳುವವನಾಗಿರುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು. ಅಧ್ಯಾಯವನ್ನು ನೋಡಿ |
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.