Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:12 - ಪರಿಶುದ್ದ ಬೈಬಲ್‌

12 ಗೌರವವೂ ಐಶ್ವರ್ಯವೂ ನಿನ್ನಿಂದಲೇ ಹೊರಡುವವು. ಎಲ್ಲವನ್ನು ಆಳುವಾತನು ನೀನೇ. ನಿನ್ನ ಬಾಹುಗಳಲ್ಲಿ ಶಕ್ತಿಸಾಮರ್ಥ್ಯವು ತುಂಬಿವೆ. ಯಾರನ್ನೇ ಆಗಲಿ ಮಹಾಪುರುಷರನ್ನಾಗಿಯೂ ಪ್ರಬಲರನ್ನಾಗಿಯೂ ಮಾಡುವ ಶಕ್ತಿಯಿರುವುದು ನಿನ್ನ ಕೈಗಳಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಸ್ತಿ - ಪಾಸ್ತಿ, ಐಶ್ವರ್ಯ ಬರುವುದು ನಿಮ್ಮಿಂದಲೇ. ಸರ್ವಾಧಿಕಾರ, ಬಲಪರಾಕ್ರಮ ಇರುವುದು ನಿಮ್ಮ ಕೈಯಲ್ಲೇ. ಪಟ್ಟ ಪದವಿಗೆ, ಸರ್ವಶಕ್ತಿ ಸಾಹಸಕ್ಕೆ ಮೂಲ ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪ್ರಭಾವೈಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ; ನೀನು ಸರ್ವಾಧಿಕಾರಿಯು; ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ; ಎಲ್ಲಾ ದೊಡ್ಡಸ್ತಿಕೆಗೂ ಶಕ್ತಿಗೂ ನೀನೇ ಮೂಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಐಶ್ವರ್ಯವೂ, ಘನವೂ ನಿಮ್ಮ ಬಳಿಯಿಂದ ಬರುತ್ತವೆ. ನೀವು ಸಮಸ್ತವನ್ನು ಆಳಿಕೆಮಾಡುವವರು. ಶಕ್ತಿಯೂ, ಪರಾಕ್ರಮವೂ ನಿಮ್ಮ ಕೈಯಲ್ಲಿ ಇವೆ. ಎಲ್ಲರಿಗೂ ಉನ್ನತಿಯನ್ನೂ, ಬಲವನ್ನೂ ಕೊಡುವುದು ನಿಮ್ಮ ಕೈಯಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:12
40 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಆತ್ಮಗಳಲ್ಲಿ ಬಲವಾಗಿರಲು ಅಗತ್ಯವಾದ ಶಕ್ತಿಯನ್ನು ತನ್ನ ಮಹಿಮಾತಿಶಯದ ಪ್ರಕಾರ ಕೊಡಬೇಕೆಂದು ತಂದೆಯನ್ನು ಕೇಳಿಕೊಳ್ಳುತ್ತೇನೆ. ಆತನು ತನ್ನ ಆತ್ಮನ ಮೂಲಕವಾಗಿ ನಿಮಗೆ ಆ ಶಕ್ತಿಯನ್ನು ಕೊಡುತ್ತಾನೆ.


ನಿಮ್ಮ ದೇವರಾದ ಯೆಹೋವನನ್ನು ಜ್ಞಾಪಕಮಾಡಿಕೊಳ್ಳಿ. ಇವೆಲ್ಲಾ ಸಂಪಾದಿಸುವುದಕ್ಕೆ ಆತನೇ ನಿಮಗೆ ಶಕ್ತಿ ಕೊಟ್ಟನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯೆಹೋವನು ನಿಮಗೆ ಹೀಗೆ ಮಾಡುವುದರ ಉದ್ದೇಶವೇನಾಗಿತ್ತು? ಆತನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.


“ನಮ್ಮ ಪಿತೃಗಳ ದೇವರಾದ ಯೆಹೋವನೇ, ನೀನು ಪರಲೋಕದಲ್ಲಿರುವ ದೇವರು. ಲೋಕದ ಎಲ್ಲಾ ದೇಶಗಳನ್ನಾಳುವವನು ನೀನೇ. ಬಲಸಾಮರ್ಥ್ಯವುಳ್ಳವನು ನೀನೇ, ಯಾರೂ ನಿನಗೆದುರಾಗಿ ನಿಲ್ಲಲಾರರು.


ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.


ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.


ಬಳಲಿಹೋದವರನ್ನು ಆತನು ಬಲಶಾಲಿಗಳನ್ನಾಗಿ ಮಾಡುತ್ತಾನೆ. ಬಲಹೀನರನ್ನು ಶಕ್ತಿವಂತರನ್ನಾಗಿ ಮಾಡುತ್ತಾನೆ.


ನಾನು ನಿನಗೆ ಜ್ಞಾನವಿವೇಕಗಳನ್ನು ಕೊಡುವೆನು. ಅದರ ಜೊತೆಯಲ್ಲಿ ನಿನಗೆ ಐಶ್ವರ್ಯವನ್ನೂ ಘನತೆಯನ್ನೂ ದಯಪಾಲಿಸುವೆನು. ನಿನಗಿಂತ ಮುಂಚೆ ಇದ್ದ ಯಾವ ಅರಸನಿಗೂ ಇಂಥಾ ಐಶ್ವರ್ಯಗಳಾಗಲಿ ಘನತೆಯಾಗಲಿ ಇರಲಿಲ್ಲ. ಮತ್ತು ಇನ್ನು ಮುಂದೆಯೂ ಯಾವ ರಾಜನಿಗೂ ಇಂಥಾ ಘನತೆ ಮತ್ತು ಐಶ್ವರ್ಯಗಳಿರುವುದಿಲ್ಲ” ಎಂದು ಹೇಳಿದನು.


ಆ ಹಿರಿಯರು ಹೀಗೆ ಹೇಳಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ಭೂತಕಾಲದಲ್ಲಿ ಇದ್ದಾತನೇ, ವರ್ತಮಾನ ಕಾಲದಲ್ಲಿ ಇರುವಾತನೇ, ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀನು ನಿನ್ನ ಮಹಾ ಅಧಿಕಾರವನ್ನು ಉಪಯೋಗಿಸಿ ನಿನ್ನ ಆಡಳಿತವನ್ನು ಆರಂಭಿಸಿದ್ದರಿಂದ ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.


“ನಾನು ಯಾವಾಗಲೂ ದೇವರಾಗಿದ್ದೇನೆ. ನನ್ನ ಕಾರ್ಯವನ್ನು ತಡೆಯಲು ಯಾರಿಗೆ ಸಾಧ್ಯ? ನನ್ನ ಬಲವಾದ ಹಸ್ತದಿಂದ ಯಾರು ಬಿಡಿಸಬಲ್ಲರು?”


ದೇವರು ಒಬ್ಬನಿಗೆ ಐಶ್ವರ್ಯವನ್ನೂ ಆಸ್ತಿಯನ್ನೂ ಮತ್ತು ಅವುಗಳನ್ನು ಅನುಭವಿಸುವ ಭಾಗ್ಯವನ್ನೂ ಕೊಟ್ಟಿದ್ದರೆ ಅವನು ಅವುಗಳನ್ನು ಅನುಭವಿಸಲಿ. ಅವನು ತನಗಿರುವಂಥವುಗಳನ್ನು ಹೊಂದಿಕೊಂಡು ತನ್ನ ದುಡಿಮೆಯಲ್ಲಿ ಸಂತೋಷಿಸಲಿ. ಅದು ದೇವರ ಅನುಗ್ರಹವಷ್ಟೇ.


ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


ಆತನನ್ನು ಸೋಲಿಸೋಣವೆಂದರೆ ಆತನೇ ಬಲಿಷ್ಠನಾಗಿದ್ದಾನೆ; ನ್ಯಾಯಾಲಯಕ್ಕೆ ಹೋಗೋಣವೆಂದರೆ ಆತನನ್ನು ನ್ಯಾಯಾಲಯಕ್ಕೆ ಬರಮಾಡುವವನು ಯಾರು?


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


“ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.


ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.


ನನ್ನಲ್ಲಿಯೂ ಸಹ ಕೊಡಲು ಐಶ್ವರ್ಯವಿದೆ ಮತ್ತು ಘನತೆಯಿದೆ. ನಾನು ಶಾಶ್ವತವಾದ ಐಶ್ವರ್ಯವನ್ನೂ ಯಶಸ್ಸನ್ನೂ ಕೊಡುವೆನು.


ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.


“ಶಕ್ತಿಯೂ ದೇವರಿಂದಲೇ” ಎಂದು ದೇವರು ನುಡಿದಿದ್ದಾನೆ.


ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ. ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.


ದೇವಪುತ್ರರೇ, ಯೆಹೋವನನ್ನು ಸ್ತುತಿಸಿರಿ! ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ.


ಯೆಹೋವನು ತನ್ನ ಜನರಿಗೆ ಬಲವೂ ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ಈ ಭೂಲೋಕದ ಜನರೆಲ್ಲರೂ ಯೆಹೋವನೇ ಸರ್ವಶಕ್ತನೆಂದು ತಿಳಿದುಕೊಳ್ಳಬೇಕೆಂದು ಆತನು ಹೀಗೆ ಮಾಡಿದನು. ಹೀಗೆ ಅವರು ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು” ಅಂದನು.


ನಮ್ಮ ದೇವರೇ, ನಿನಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿನ್ನ ಪ್ರಭಾವವುಳ್ಳ ನಾಮವನ್ನು ಸ್ತುತಿಸುತ್ತೇವೆ.


ಅವನು ನಗರಗಳನ್ನು ಕಟ್ಟಿಸಿದನು. ಅವನಿಗೆ ದನಕುರಿಗಳ ದೊಡ್ಡ ಹಿಂಡುಗಳಿದ್ದವು; ದೇವರು ಅವನಿಗೆ ಅಪರಿಮಿತವಾದ ಐಶ್ವರ್ಯವನ್ನು ಕೊಟ್ಟನು.


“ದೇವರ ನಾಮವನ್ನು ಎಂದೆಂದಿಗೂ ಸ್ತುತಿಸಿರಿ! ಜ್ಞಾನವೂ ಸಾಮರ್ಥ್ಯವೂ ಆತನವೇ.


ನನ್ನ ಒಡೆಯನೇ, ನೀನು ಪ್ರೀತಿಸ್ವರೂಪನಾಗಿರುವೆ. ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವವನು ನೀನೇ.


ಯೆಹೋವನ ಸಿಂಹಾಸನವು ಪರಲೋಕದಲ್ಲಿದೆ. ಆತನು ಸಮಸ್ತವನ್ನು ಆಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು