Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:14 - ಪರಿಶುದ್ದ ಬೈಬಲ್‌

14 ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವು ಈ ಪ್ರಕಾರ ಸ್ವೇಚ್ಫೆಯಿಂದ ಕಾಣಿಕೆಗಳನ್ನು ಸಮರ್ಪಿಸಲು ಶಕ್ತಿಹೊಂದಿದ್ದಕ್ಕೆ ನಾನಾಗಲಿ ನನ್ನ ಪ್ರಜೆಗಳಾಗಲಿ ಎಷ್ಟರವರು? ಸಮಸ್ತವು ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:14
24 ತಿಳಿವುಗಳ ಹೋಲಿಕೆ  

ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ.


ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್.


ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು.


ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ.


ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.


ಆಗ ರಾಜನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತು, “ನನ್ನ ಒಡೆಯನಾದ ಯೆಹೋವನೇ, ನಾನೆಷ್ಟರವನು? ನನ್ನ ಕುಲ ಎಷ್ಟರದು? ನೀನು ನನ್ನನ್ನೇಕೆ ಇಷ್ಟು ಉದ್ಧರಿಸಿದೆ?


ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.


ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”


ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:


ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.


ನಮ್ಮ ದೇವರೇ, ನಿನಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿನ್ನ ಪ್ರಭಾವವುಳ್ಳ ನಾಮವನ್ನು ಸ್ತುತಿಸುತ್ತೇವೆ.


ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.


‘ಅವರ ಬೆಳ್ಳಿಯೆಲ್ಲವೂ ನನ್ನದೇ, ಅವರ ಬಂಗಾರವೂ ನನ್ನದೇ.’ ಇದು ಸರ್ವಶಕ್ತನಾದ ಯೆಹೋವನ ನುಡಿ.


ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು.


ಅಲ್ಲಿ ನಿಮ್ಮ ದೇವರಾದ ಯೆಹೋವನಿಗೆ ವಾರಗಳ ಹಬ್ಬವನ್ನು ಆಚರಿಸಿರಿ. ಅಲ್ಲಿ ನಿಮ್ಮ ವಿಶೇಷ ಕಾಣಿಕೆಗಳನ್ನು ತಂದು ಸಮರ್ಪಿಸಿರಿ. ನಿಮ್ಮ ದೇವರು ನಿಮ್ಮನ್ನು ಎಷ್ಟು ಆಶೀರ್ವದಿಸಿರುತ್ತಾನೆಂದು ಯೋಚಿಸಿ ಅದರ ಪ್ರಕಾರ ನಿಮ್ಮ ಕಾಣಿಕೆಗಳನ್ನು ಸಲ್ಲಿಸಿರಿ.


ಪ್ರತಿಯೊಬ್ಬನೂ ಯೆಹೋವನು ತನ್ನನ್ನು ಆಶೀರ್ವದಿಸಿದ ಮೇರೆಗೆ ಆತನಿಗೆ ಕಾಣಿಕೆಯನ್ನರ್ಪಿಸಬೇಕು.


ಆಗ ದಾವೀದನು ಪವಿತ್ರಗುಡಾರಕ್ಕೆ ಹೋಗಿ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರಾದ ಯೆಹೋವನೇ, ನೀನು ನನ್ನನ್ನೂ ನನ್ನ ಕುಟುಂಬವನ್ನೂ ಎಷ್ಟೋ ಆಶೀರ್ವದಿಸಿರುವೆ. ನೀನು ಯಾಕೆ ಹೀಗೆ ಮಾಡಿದಿಯೊ ನನಗೆ ತಿಳಿಯುತ್ತಿಲ್ಲ.


ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವುದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟುಗೂಡಿಸಿದ್ದೇವೆ. ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; ಇವೆಲ್ಲಾ ನಿನಗೇ ಸಂಬಂಧಪಟ್ಟವುಗಳು.


“ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನು. ಆದ್ದರಿಂದ ಆತನಿಗಾಗಿ ನಾನು ಮಹತ್ತಾದ ಆಲಯವನ್ನು ಕಟ್ಟುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು