1 ಪೂರ್ವಕಾಲ ವೃತ್ತಾಂತ 29:17 - ಪರಿಶುದ್ದ ಬೈಬಲ್17 ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.