1 ಪೂರ್ವಕಾಲ ವೃತ್ತಾಂತ 29:18 - ಪರಿಶುದ್ದ ಬೈಬಲ್18 ಯೆಹೋವನೇ, ನಮ್ಮ ಪೂರ್ವಿಕರಾದ ಅಬ್ರಹಾಮ, ಇಸಾಕ ಮತ್ತು ಯಾಕೋಬರ ದೇವರು ನೀನೇ. ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆಮಾಡುವಂತೆ ಸಹಾಯಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಮ್ಮ ಪಿತೃಗಳಾದ ಅಬ್ರಹಾಮನ, ಇಸಾಕನ, ಇಸ್ರಾಯೇಲನ ದೇವರಾದ ಯೆಹೋವ ದೇವರೇ, ನಿಮ್ಮ ಜನರ ಹೃದಯದ ಮನೋಭಾವನೆಯಲ್ಲಿ ಭಕ್ತಿಯನ್ನು ನಿರಂತರವಾಗಿ ಕಾಪಾಡಿ, ಅವರ ಹೃದಯವನ್ನು ನಿಮಗೆ ಸಿದ್ಧಮಾಡಿ. ಅಧ್ಯಾಯವನ್ನು ನೋಡಿ |
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.