Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:12 - ಪರಿಶುದ್ದ ಬೈಬಲ್‌

12 ಯೆಹೋವಾಷನ ಮಗನು ಅಮಚ್ಯ. ಅಮಚ್ಯನ ಮಗನು ಅಜರ್ಯ. ಅಜರ್ಯನ ಮಗನು ಯೋತಾಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಮಚ್ಯ, ಅಜರ್ಯ, ಯೋತಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವನ ಮಗನು ಯೆಹೋವಾಷ್; ಇವನ ಮಗನು ಅಮಚ್ಯ; ಇವನ ಮಗನು ಅಜರ್ಯ; ಇವನ ಮಗನು ಯೋತಾಮ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:12
12 ತಿಳಿವುಗಳ ಹೋಲಿಕೆ  

ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್. ಆಕೆ ಜೆರುಸಲೇಮಿನವಳು.


ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನ ವಿರುದ್ಧ ಸಂಚುಗಳನ್ನು ಮಾಡಿ ಪೆಕಹನನ್ನು ಕೊಂದುಹಾಕಿದನು. ಪೆಕಹನ ನಂತರ ಹೋಶೇಯನು ಹೊಸ ರಾಜನಾದನು. ಉಜ್ಜೀಯನ ಮಗನಾದ ಯೋತಾಮನು ಯೆಹೂದದ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಹೀಗಾಯಿತು.


ನಂತರ ಯೆಹೂದದ ಜನರೆಲ್ಲರೂ ಅಜರ್ಯನನ್ನು ನೂತನ ರಾಜನನ್ನಾಗಿ ಮಾಡಿದರು. ಅಜರ್ಯನಿಗೆ ಹದಿನಾರು ವರ್ಷ ವಯಸ್ಸಾಗಿತ್ತು.


ಯೆಹೋವಾಹಾಜನ ಮಗನಾದ ಯೋವಾಷನು ಇಸ್ರೇಲಿನ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೆಹೋವಾಷನ ಮಗ ಅಮಚ್ಯನು ಯೆಹೂದದ ರಾಜನಾದನು.


ಯೋತಾಮನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನ ತಾಯಿ ಚಾದೋಕನ ಮಗಳಾದ ಯೆರೂಷ.


ಆ ಬಳಿಕ ಯೆಹೂದದ ಜನರು ಅಮಚ್ಯನ ಮಗನಾದ ಉಜ್ಜೀಯನನ್ನು ತಮ್ಮ ಅರಸನನ್ನಾಗಿ ಆರಿಸಿಕೊಂಡರು. ಆಗ ಅವನಿಗೆ ಹದಿನಾರು ವರ್ಷ.


ಉಜ್ಜೀಯನ ಮಗನಾದ ಯೋತಾಮನು ಯೆಹೂದದ ರಾಜನಾದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾದ ಎರಡನೆಯ ವರ್ಷದಲ್ಲಿ ಹೀಗಾಯಿತು.


ರಾಜನಾದ ಅಜರ್ಯನು ಕುಷ್ಠರೋಗ ಪೀಡಿತನಾಗುವಂತೆ ಯೆಹೋವನು ಮಾಡಿದನು. ಅವನು ಸಾಯುವವರೆಗೂ ಕುಷ್ಠರೋಗಿಯಾಗಿಯೇ ಇದ್ದನು. ಅಜರ್ಯನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸುತ್ತಿದ್ದನು. ರಾಜನ ಮಗನಾದ ಯೋತಾಮನು ರಾಜನ ಅರಮನೆಯನ್ನು ನೋಡಿಕೊಳ್ಳುತ್ತಿದ್ದನು ಮತ್ತು ಜನರನ್ನು ಪಾಲಿಸುತ್ತಿದ್ದನು.


ಯೆಹೋಷಾಫಾಟನ ಮಗನು ಯೆಹೋರಾಮ್. ಯೆಹೋರಾಮನ ಮಗನು ಅಹಜ್ಯ. ಅಹಜ್ಯನ ಮಗನು ಯೆಹೋವಾಷ.


ಯೋತಾಮನ ಮಗನು ಅಹಾಜ. ಅಹಾಜನ ಮಗನು ಹಿಜ್ಕೀಯ. ಹಿಜ್ಕೀಯನ ಮಗನು ಮನಸ್ಸೆ.


ಅಜರ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ, ದಾವೀದ ನಗರದಲ್ಲಿ ಸಮಾಧಿಮಾಡಲಾಯಿತು. ಅಜರ್ಯನ ನಂತರ ಅವನ ಮಗನಾದ ಯೋತಾಮನು ಹೊಸ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು