1 ಪೂರ್ವಕಾಲ ವೃತ್ತಾಂತ 3:2 - ಪರಿಶುದ್ದ ಬೈಬಲ್2 ಅಬ್ಷಾಲೋಮನು ದಾವೀದನ ಮೂರನೆಯ ಮಗನು. ಇವನ ತಾಯಿ ಮಾಕಳು. ಈಕೆಯು ಗೆಷೂರಿನ ಅರಸನಾದ ತಲ್ಮೈಯ ಮಗಳು. ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಬ್ಷಾಲೋಮ - ಗೆಷೂರಿನ ಅರಸ ತಲ್ಮೈಯ ಮಗಳು ಮಾಕ ಇವನ ತಾಯಿ. ಅದೋನಿಯ - ಹಗ್ಗೀತ್ ಇವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರನು. ನಾಲ್ಕನೆಯವನು ಅದೋನೀಯ; ಇವನು ಹಗ್ಗೀತಳ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.
ಅಬ್ಷಾಲೋಮನು ಯೋವಾಬನಿಗೆ, “ನಾನು ನಿನಗೆ ಸಂದೇಶವನ್ನು ಕಳುಹಿಸಿ ಇಲ್ಲಿಗೆ ಬರಲು ಹೇಳಿ ಕಳುಹಿಸಿದ್ದೆನು. ರಾಜನ ಬಳಿಗೆ ನಿನ್ನನ್ನು ಕಳುಹಿಸಲು ನಾನು ಅಪೇಕ್ಷಿಸಿದೆನು. ಗೆಷೂರಿನಿಂದ ನನ್ನನ್ನು ಮನೆಗೆ ಕರೆಸಲು ಅವನು ಇಚ್ಛಿಸಿದ್ದು ಏಕೆ ಎಂಬುದನ್ನು ನೀನು ಕೇಳಬೇಕೆಂದು ನಾನು ಅಪೇಕ್ಷಿಸಿದೆನು. ನಾನು ಅವನನ್ನು ನೋಡಲಾಗದಿದ್ದರೆ ಗೆಷೂರಿನಲ್ಲಿ ವಾಸಿಸುವುದೇ ನನಗೆ ಚೆನ್ನಾಗಿರುತ್ತಿತ್ತು. ಈಗ ರಾಜನನ್ನು ನೋಡಲು ನನಗೆ ಅವಕಾಶವನ್ನು ಕೊಡು. ನಾನು ಪಾಪವನ್ನು ಮಾಡಿದ್ದರೆ ಅವನು ನನ್ನನ್ನು ಕೊಂದುಬಿಡಲಿ!” ಎಂದನು.