Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:5 - ಪರಿಶುದ್ದ ಬೈಬಲ್‌

5 ದಾವೀದನಿಗೆ ಜೆರುಸಲೇಮಿನಲ್ಲಿ ಹುಟ್ಟಿದ ಮಕ್ಕಳು ಯಾರೆಂದರೆ: ಬತ್ಷೇಬಳ ನಾಲ್ಕು ಮಂದಿ ಮಕ್ಕಳು: ಶಿಮ್ಮ ಶೋಬಾಬ್, ನಾತಾನ್ ಮತ್ತು ಸೊಲೊಮೋನನು. ಬತ್ಷೇಬಳು ಅಮ್ಮೀಯೇಲನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಲ್ಲಿ ಅವನಿಗೆ ಅನೇಕ ಗಂಡುಮಕ್ಕಳು ಹುಟ್ಟಿದರು. ದಾವೀದನ ಹೆಂಡತಿ ಬತ್ಷೂವ ಅಮ್ಮೀಯೇಲನ ಮಗಳು. ಆಕೆ - ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡುಮಕ್ಕಳಿಗೆ ಜನ್ಮವಿತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆರೂಸಲೇವಿುನಲ್ಲಿರುವಾಗ ಅವನಿಗೆ - ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ವರು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ದಾವೀದನ ಹೆಂಡತಿ ಬತ್ಷೆಬೆಳು ಅಮ್ಮಿಯೇಲನ ಮಗಳು. ಆಕೆಗೆ ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡು ಮಕ್ಕಳು ಜನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:5
11 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಸೇವಕರನ್ನು ಕರೆದು ಅವಳು ಯಾರೆಂದು ಕೇಳಿದನು. ಒಬ್ಬ ಸೇವಕನು, “ಅವಳು ಎಲೀಯಾಮನ ಮಗಳಾದ ಬತ್ಷೆಬೆಳು. ಹಿತ್ತಿಯನಾದ ಊರೀಯನ ಹೆಂಡತಿ” ಎಂದು ಉತ್ತರಿಸಿದನು.


ಎಲಿಯಕೀಮನು ಮೆಲೆಯನ ಮಗನು. ಮೆಲೆಯನು ಮೆನ್ನನ ಮಗನು. ಮೆನ್ನನು ಮತ್ತಾಥನ ಮಗನು. ಮತ್ತಾಥನು ನಾತಾನನ ಮಗನು. ನಾತಾನನು ದಾವೀದನ ಮಗನು.


ಇಷಯನು ಅರಸನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ. (ಸೊಲೊಮೋನನ ತಾಯಿ ಊರೀಯನ ಹೆಂಡತಿಯಾಗಿದ್ದಳು.)


ರಾಜನಾದ ಸೊಲೊಮೋನನು ತನ್ನ ತಾಯಿಗೆ, “ಅಬೀಷಗಳನ್ನು ಅವನಿಗೆ ಕೊಡು ಎಂಬುದಾಗಿ ನೀನೇಕೆ ನನ್ನನ್ನು ಕೇಳುತ್ತಿರುವೆ? ಅವನು ನನ್ನ ಹಿರಿಯಣ್ಣನಾಗಿರುವುದರಿಂದ ಅವನನ್ನೇ ರಾಜನನ್ನಾಗಿ ಮಾಡೆಂದು ನೀನು ಕೇಳದಿರುವುದೇಕೆ? ಯಾಜಕನಾದ ಎಬ್ಯಾತಾರನೂ ಯೋವಾಬನೂ ಅವನಿಗೆ ಬೆಂಬಲವನ್ನು ನೀಡಿದರು!” ಎಂದು ಉತ್ತರಿಸಿದನು.


ಇವರಲ್ಲದೆ ಅವನ ಬೇರೆ ಒಂಭತ್ತು ಮಕ್ಕಳು ಯಾರೆಂದರೆ: ಇಬ್ಹಾರ್, ಎಲೀಷಾಮ, ಎಲೀಫೆಲೆಟ್, ನೋಗ, ನೆಫೆಗ್, ಯಾಫೀಯ, ಎಲೀಷಾಮ, ಎಲ್ಯಾದ ಮತ್ತು ಎಲೀಫೆಲೆಟ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು